ಟ್ವಿಟ್ಟರ್ ನಲ್ಲಿ `ರಾಜ’ಹುಲಿ ದಾಖಲೆ : ರಾಜ್ಯದ ಮೊದಲ ರಾಜಕಾರಣಿ b s yeddyurappa
ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದರೂ ಬಿ.ಎಸ್.ಯಡಿಯೂರಪ್ಪ ಫಾಲೋಯಿಂಗ್ ಮಾತ್ರ ಕಡಿಮೆಯಾಗಿಲ್ಲ.
ಬಿಎಸ್ ವೈ ಇದೀಗ ಟ್ವಿಟ್ಟರ್ ನಲ್ಲಿ ದಾಖಲೆ ಬರೆದಿದ್ದಾರೆ. ಟ್ವಿಟ್ಟರ್ ನಲ್ಲಿ ಅತಿಹೆಚ್ಚು ಫ್ಯಾನ್ ಫಾಲೋಯಿಂಗ್ ಹೊಂದಿರುವ ಪಟ್ಟಿಯಲ್ಲಿ ಬಿ.ಎಸ್.ಯಡಿಯೂರಪ್ಪ ದಾಖಲೆ ನಿರ್ಮಿಸಿದ್ದಾರೆ.
ಬರೊಬ್ಬರಿ 10 ಲಕ್ಷ ಹಿಂಬಾಲಕರನ್ನು ಹೊಂದಿರುವ ರಾಜ್ಯದ ಮೊದಲ ರಾಜಕಾರಣಿಯಾಗಿ ಯಡಿಯೂರಪ್ಪ ಹೊರಹೊಮ್ಮಿದ್ದಾರೆ.
ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ದಿನದಿಂದ ದಿನಕ್ಕೆ ಫಾಲೋವರ್ಸ್ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು, ಇದೀಗ 10 ಲಕ್ಷ ಹಿಂಬಾಲಕರನ್ನು ತಲುಪಿದೆ.
ಇನ್ನು ಬಗ್ಗೆ ಟ್ವೀಟ್ ಮಾಡಿರುವ ಅವರು, ನಮ್ಮ ಬಳಗ ದಶಲಕ್ಷದ ಮೈಲಿಗಲ್ಲು ದಾಟಿರುವುದು ನಿಮ್ಮೆಲ್ಲರ ಪ್ರೀತಿ, ಅಭಿಮಾನಗಳ ಸಂಕೇತ ಎಂದು ಭಾವಿಸುತ್ತೇನೆ.
ತಮ್ಮ ಅಭಿಮಾನದಿಂದ ಸದಾ ನನ್ನನ್ನು ಹಾರೈಸುತ್ತಿರುವ ಎಲ್ಲರಿಗೂ ನನ್ನ ಹೃದಯಪೂರ್ವಕ ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ.









