ಸಿಎಂ ಬದಲಾವಣೆ ವಿಚಾರ | ವರಿಷ್ಠರ ತೀರ್ಮಾನಕ್ಕೆ ನಾವು ಬದ್ಧ : ಪಾಟೀಲ್
ಬೆಂಗಳೂರು : ಯಡಿಯೂರಪ್ಪನವರು ಸಿಎಂ ಆದಾಗಿನಿಂದಲೂ ನಾಯಕತ್ವ ಬದಲಾವಣೆಯ ಚರ್ಚೆ ನಡೆಯುತ್ತಲೇ ಇದೆ. ಆದ್ರೆ ಇದರ ಬಗ್ಗೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಸ್ಪಷ್ಟನೆ ನೀಡಿದ್ದಾರೆ.
ಈ ವಿಚಾರವಾಗಿ ಪಕ್ಷದ ವರಿಷ್ಠರು ಯಾವುದೇ ನಿರ್ಧಾರ ತೆಗೆದುಕೊಂಡರೂ ಅದಕ್ಕೆ ನಾವು ಬದ್ಧ ಎಂದು ಸಚಿವ ಬಿ.ಸಿ.ಪಾಟೀಲ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಯಕತ್ವ ಬದಲಾವಣೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದರು.
ನಾಯಕತ್ವ ಬದಲಾವಣೆಯ ಚರ್ಚೆಯು ಯಡಿಯೂರಪ್ಪ ಅವರು ಮುಖ್ಯಮಂತ್ರಿ ಹುದ್ದೆಗೇರಿದಾಗಿನಿಂದಲೂ ಈ ಇದೆ.
ಆದರೆ ರಾಜ್ಯ ಬಿಜೆಪಿ ಉಸ್ತುವಾರಿಗಳಾದ ಅರುಣ್ ಸಿಂಗ್ ನಾಯಕತ್ವ ಬದಲಾವಣೆಯಾಗಲೀ ಮುಖ್ಯಮಂತ್ರಿಯ ಬದಲಾವಣೆಯಾಗಲೀ ಇಲ್ಲ.
ಜೂನ್ 16 ರಂದು ಉಸ್ತುವಾರಿಗಳು ಸಭೆ ಕರೆದಿದ್ದಾರಾದರೂ ಚರ್ಚೆಯ ವಿಷಯ ಗೊತ್ತಿಲ್ಲ. ಸಚಿವರ ಸಭೆಯದು. ಅದರಲ್ಲಿ ತಾವು ಸಹ ಭಾಗವಹಿಸುತ್ತಿದ್ದೇನೆ ಎಂದು ತಿಳಿಸಿದರು.
ಇದೇ ವೇಳೆ ಇನ್ನೂ ಎರಡು ವರ್ಷ ಬಿ.ಎಸ್.ಯಡಿಯೂರಪ್ಪ ಅವರೇ ಸಿಎಂ ಆಗಿ ಮುಂದುವರೆಯಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಸಿದ ಪಾಟೀಲ್, ಇದನ್ನೇ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಸಹ ತಿಳಿಸಿದ್ದಾರೆ. ಪಕ್ಷದ ವರಿಷ್ಠರು ಯಾವುದೇ ತೀರ್ಮಾನ ಕೈಗೊಂಡರೂ ಎಲ್ಲರೂ ಅದಕ್ಕೆ ಬದ್ಧರಾಗಬೇಕು ಎಂದರು.









