B S Yediyurappa | ಸಿಎಂ ಬದಲಾವಣೆ ಬಗ್ಗೆ ಬಿಎಸ್ ವೈ ಸ್ಪಷ್ಟನೆ
ಬೆಂಗಳೂರು : ಶೀಘ್ರದಲ್ಲಿಯೇ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಆಗಲಿದೆ.
ಬಿಜೆಪಿ ಸರ್ಕಾರದಲ್ಲಿ ಮೂರನೇ ಮುಖ್ಯಮಂತ್ರಿ ಪ್ರಮಾಣ ಸ್ವೀಕರಿಸಲಿದ್ದಾರೆ ಎಂಬ ಊಹಾಪೋಹಗಳು ರಾಜ್ಯ ರಾಜಕೀಯವಲಯದಲ್ಲಿ ಹರಿದಾಡುತ್ತಿವೆ.
ಸ್ವತಃ ಬಿಜೆಪಿ ಮುಖಂಡರೇ ಮುಖ್ಯಮಂತ್ರಿ ಬದಲಾವಣೆ ಆಗಬಹುದು ಅಂತಾ ಹೇಳುತ್ತಿದ್ದಾರೆ.
ಈ ನಡುವೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರನ್ನು ಹೋದೆಲ್ಲಾ ಮುಂದಿನ ಸಿಎಂ ಅಂತಾ ಕರೆಯಲಾಗುತ್ತಿದೆ.

ಹೀಗಾಗಿ ಇನ್ನೇನು ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಇರುವ ಈ ಸಂದರ್ಭದಲ್ಲಿ ಸಿಎಂ ಬದಲಾಗುವುದು ಖಂಡಿತ ಅಂತಾ ಹೇಳಲಾಗುತ್ತಿದೆ. ಇದಕ್ಕೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ಎಸ್.ವೈ, 3ನೇ ಸಿಎಂ ಎಂಬ ಕಾಂಗ್ರೆಸ್ ಟ್ವೀಟ್ ನಲ್ಲಿ ಸತ್ಯಾಂಶ ಇಲ್ಲ. ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಕೇವಲ ಏಳೆಂಟು ತಿಂಗಳಿಗೆ ಸಿಎಂ ಬದಲಾವಣೆ ಪ್ರಶ್ನೆ ಬರಲ್ಲ. ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಆಗಲ್ಲ.
ನಾಯಕತ್ವ ಬದಲಾವಣೆಯ ಪ್ರಶ್ನೆಯೇ ಉದ್ಭವಿಸಲ್ಲ. ಸಿಎಂ ಬೊಮ್ಮಾಯಿ ಉಳಿದ ಅವಧಿಯನ್ನು ಪೂರೈಸುತ್ತಾರೆ ಎಂದು ಬಿಎಸ್ ವೈ ಸ್ಪಷ್ಟಪಡಿಸಿದ್ದಾರೆ.
ಇದನ್ನೂ ಓದಿ : H D Kumaraswamy | ಅಶ್ವತ್ಥನಾರಾಯಣ ಹಲ್ಲು ಹಿಡಿದು ಮಾತನಾಡಿದರೆ ಉತ್ತಮ








