B.S.Yediyurappa | ಲೋಕಾಯುಕ್ತದಲ್ಲಿ ಬಿಎಸ್ ವೈ ವಿರುದ್ಧ ಎಫ್ ಐಆರ್
ಬೆಂಗಳೂರು : ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ಅವರ ಕುಟುಂಬದ ಮೇಲೆ ಲೋಕಾಯುಕ್ತದಲ್ಲಿ ಎಫ್ ಐಆರ್ ದಾಖಲಾಗಿದೆ.
ಬಿಎಸ್ ಯಡಿಯೂರಪ್ಪ ಸಿಎಂ ಆಗಿದ್ದ ಸಂದರ್ಭದಲ್ಲಿ ಬಿಡಿಎ ಕಾಂಟ್ರಾಕ್ಟ್ ನೀಡುವ ಸಂಬಂಧ ಭ್ರಷ್ಟಾಚಾರ ಆಗಿದೆ ಎಂದು ಟಿ.ಜೆ.ಅಬ್ರಾಹಂ ಎಂಬುವವರು ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು.
ಆದ್ರೆ ರಾಜ್ಯಪಾಲರು ಪೂರ್ವಾನುಮತಿ ನೀಡದ ಕಾರಣ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ದೂರನ್ನು ವಜಾ ಮಾಡಿತ್ತು.

ಇದನ್ನೆ ಪ್ರಶ್ನಿಸಿ ಅಬ್ರಾಹಂ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು.
ಈ ವೇಳೆ ಹೈಕೋರ್ಟ್ ಅಬ್ರಾಹಂ ಪರವಾಗಿ ತೀರ್ಪು ನೀಡಿದ್ದು, ಪ್ರಕರಣ ದಾಖಲಿಸಿ ವರದಿ ನೀಡುವಂತೆ ಲೋಕಾಯುಕ್ತಕ್ಕೆ ಸೂಚಿಸಿತ್ತು.
ಈ ಹಿನ್ನೆಲೆಯಲ್ಲಿ ಬಿಎಸ್ ವೈ ವಿರುದ್ಧ ದೂರು ದಾಖಲಿಸಿಕೊಂಡಿರುವ ಲೋಕಾಯುಕ್ತ ಪೊಲೀಸರು ತನಿಖೆಗೆ ಮುಂದಾಗಿದ್ದಾರೆ.