ಟಾರ್ಚ್ ಬೆಳಗಿಸಿ ರಾಜಾಹುಲಿ ಹುಟ್ಟುಹಬ್ಬಕ್ಕೆ ವಿಶೇಷ ಗೌರವ ಸಲ್ಲಿಸಿದ ಮೋದಿ….
ದಕ್ಷಿಣಾ ಭಾರತದ ಜನಪ್ರಿಯ ಭಾಜಪಾ ನಾಯಕ ಬಿ ಎಸ್ ಯಡಿಯೂರಪ್ಪ ಹುಟ್ಟು ಹಬ್ಬದಂದು ಪ್ರಧಾನಿ ಮೋದಿಯವರು ಶಿವಮೊಗ್ಗ ವಿಮಾನ ನಿಲ್ದಾಣವನ್ನ ಉದ್ಘಾಟಿಸಿದ್ದಾರೆ. ನಂತರ ಶಿವಮೊಗ್ಗದ ಜನರನ್ನ ಉದ್ದೇಶಿಸಿ ಮಾತನಾಡಿ ಶಿವಮೊಗ್ಗದ ಹಲವು ವಿಶೇಷಗಳನ್ನ ತಮ್ಮ ಭಾಷಣದಲ್ಲಿ ಸ್ಮರಿಸಿದ್ದಾರೆ.
ಕನ್ನಡದಲ್ಲಿಯೇ ಮಾತು ಶುರು ಮಾಡಿದ ಪ್ರಧಾನಿ ಮೋದಿ ರಾಷ್ಟ್ರ ಕವಿ ಕುವೆಂಪು ಅವರನ್ನ ಸ್ಮರಿಸಿ ಸಿರಿಗನ್ನಡಂ ಗೆಲ್ಗೆ, ಸಿರಿಗನ್ನಡಂ ಬಾಳ್ಗೆ ಎಂದು ಮೋದಿಯವರು ಭಾಷಣ ಆರಂಭಿಸಿದರು. ಶಿವಮೊಗ್ಗದ ಜನರ ಬಹುದಿನಗಳ ಬೇಡಿಕೆ ಈಡೇರಿದೆ. ಇಂದು ಸಾಕಷ್ಟು ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದ್ದೇನೆ ಎಂದರು.
ಈ ವೇಳೆ ಯಡಿಯೂರಪ್ಪ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ತಿಳಿಸಿದ ಮೋದಿಯವರು, ನೆರದಿದ್ದ ಜನರಿಗೆ ತಮ್ಮ ಮೊಬೈಲ್ ಟಾರ್ಚ್ ಆನ್ ಮಾಡಿ ಬಿಎಸ್ ಯಡಿಯೂರಪ್ಪನವರಿಗೆ ಹುಟ್ಟು ಹಬ್ಬದ ಶುಭಾಶಯ ತಿಳಿಸಲು ಹೇಳಿದರು. ಬಳಿಕ ಬಿಎಸ್ ಯಡಿಯೂರಪ್ಪ ಅವರನ್ನು ಕೊಂಡಾಡಿದರು.
ಬಿಎಸ್ವೈ ವಿಧಾನಸಭೆಯಲ್ಲಿ ವಿದಾಯದ ಭಾಷಣವನ್ನ ನೆನಪಿಸಿಕೊಂಡ ಪ್ರಧಾನಿ ಮೋದಿ “ಇದು ಎಲ್ಲರಿಗೂ ಪ್ರೇರಣೆ ನೀಡುವಂಥದ್ದಾಗಿದ್ದೆ. 50 ವರ್ಷಗಳಿಂದ ಯಡಿಯೂರಪ್ಪನವರು ಜನಸೇವೆಯಲ್ಲಿದ್ದಾರೆ. ಕರ್ನಾಟಕದ ಅಭಿವೃದ್ಧಿ ರಥದಲ್ಲಿ ಅಭಿವೃದ್ಧಿ ಪಥವಿದೆ. ಡಬಲ್ ಇಂಜಿನ್ ಸರ್ಕಾರದಿಂದ ಅಭಿವೃದ್ಧಿಯ ರಥ ಸಾಗುತ್ತಿದೆ ಎಂದು ತಿಳಸಿದರು.
b s yediyurappa: Modi paid special tribute to B S yadiyurappa by lighting a torch…