ಬಿಎಸ್ ವೈ ಕೆಳಗಿಳಿದ್ರೆ ಬಿಜೆಪಿಗೆ ಹೊಡೆತ : ರಂಭಾಪುರಿ ಶ್ರೀ
ರಾಯಚೂರು :ರಾಜಕೀಯದಲ್ಲಿ ಸಂಘರ್ಷ ಇರುವುದು ಸಹಜ. ಆದ್ರೆ ಅಧಿಕಾರದ ಅವಧಿ ಇರುವವರೆಗೂ ಯಡಿಯೂರಪ್ಪನವರೇ ಮುಖ್ಯಮಂತ್ರಿ ಆಗಿರುತ್ತಾರೆ ಎಂದು ರಂಭಾಪುರಿ ಪೀಠದ ಜಗದ್ಗುರು ಡಾ ವೀರಸೋಮೇಶ್ವರ್ ಭಾಗವತ್ಪಾದರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ನಾಯಕತ್ವ ಬದಲಾವಣೆ ವಿಚಾರವಾಗಿ ಬಾಳೆಹೊನ್ನೂರಿನಲ್ಲಿ ಪ್ರತಿಕ್ರಿಯೆ ನೀಡಿದ ರಂಭಾಪುರಿ ಪೀಠದ ಜಗದ್ಗುರುಗಳು, ರಾಜಕೀಯದಲ್ಲಿ ಸಂಘರ್ಷ ಇರುವುದು ಸಹಜ.
ಯಾರು ಏನೇ ಹೇಳಲಿ ನಮಗೆ ಆತ್ಮವಿಶ್ವಾಸವಿದೆ, ಇರುವಂತ ಅವಧಿವರೆಗೆ ಯಡಿಯೂರಪ್ಪನವರೇ ಸಿಎಂ ಆಗಿ ಇರುತ್ತಾರೆ. ಆಕಸ್ಮಿಕವಾಗಿ ಸಿಎಂ ಬದಲಾವಣೆ ಮಾಡಿದ್ರೆ, ಬಿಜೆಪಿ ಪಕ್ಷದ ಮೇಲೆ ಬಹುದೊಡ್ಡ ಹೊಡೆತ ಬೀಳುವುದು ಎಂದು ಎಚ್ಚರಿಸಿದರು.
ಇನ್ನು ಯಡಿಯೂರಪ್ಪ ಇಳಿಯ ವಯಸ್ಸಿನಲ್ಲಿಯೂ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಯಡಿಯೂರಪ್ಪಗೆ ಎಲ್ಲಾ ಜನಾಂಗದವರು ಬೆಂಬಲ ಕೊಟ್ಟಿದ್ದಾರೆ.
ಅವರ ಜನಪರ ಕಾಳಜಿ ಬಗ್ಗೆ ಯಾರು ಅಲ್ಲೆಗಳೆಯುವಂತೆ ಇಲ್ಲ. ನಾವು ಅಷ್ಟೇ ಅಲ್ಲ ಸುತ್ತೂರು ಶ್ರೀಗಳು, ಆದಿಚುಂಚನಗಿರಿಯವರು ಸಹ ಬೆಂಬಲ ಸೂಚಿಸಿದ್ದಾರೆ ಎಂದು ಬಿ.ಎಸ್.ಯಡಿಯೂರಪ್ಪ ಪರ ಬ್ಯಾಟ್ ಬೀಸಿದ್ದಾರೆ.