B.S.Yediyurappa | ಸಿದ್ದರಾಮಯ್ಯಗೆ ನಾಲಿಗೆ ಮೇಲೆ ಹಿಡಿತವಿಲ್ಲ
ಹಾಸನ : ಸಿದ್ದರಾಮಯ್ಯಗೆ ನಾಲಿಗೆ ಮೇಲೆ ಹಿಡಿತವಿಲ್ಲ. ಸಿದ್ದರಾಮಯ್ಯ ಯಾವ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುತ್ತಾರೆ ಎಂಬೋದನ್ನ ಮೊದಲು ಕ್ಷೇತ್ರ ಹುಡುಕಿಕೊಂಡು ಮಾತನಾಡಲಿ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಟಾಂಗ್ ನೀಡಿದರು.
ರಾಜ್ಯ ಸರ್ಕಾರದ ಹಗರಣದಲ್ಲಿ ಕೇಂದ್ರ ಸರ್ಕಾರಕ್ಕೆ ಪಾಲು ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಹಾಸನದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.
ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆ ಕರ್ನಾಟಕದಲ್ಲಿ ಪರಿಣಾಮ ಬೀರುವುದಿಲ್ಲ. ದೇಶದಲ್ಲಿ ಕಾಂಗ್ರೆಸ್ ದೂಳಿಪಟವಾಗಿದೆ. ಇಡೀ ದೇಶದಲ್ಲೇ ಮೋದಿಯವರ ಪರ ಅಲೆ ಜಾಸ್ತಿ ಇದೆ ಎಂದು ಬಿಎಸ್ ವೈ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಇದೇ ವೇಳೆ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ ಬಿ.ಎಸ್.ಯಡಿಯೂರಪ್ಪ, ಸಿದ್ದರಾಮಯ್ಯ ನಾಲಿಗೆ ಹದ್ದುಬಸ್ತಲಿ ಇಟ್ಟುಕೊಳ್ಳಬೇಕು.
ಈ ರೀತಿ ಹುಚ್ಚುಚ್ಚಾಗಿ ಮಾತನಾಡುವುದು ಅವರಿಗೆ ಶೋಭೆ ತರುವುದಿಲ್ಲ. ಮೈಸೂರಿನಲ್ಲಿ ಯಾಕೆ ಅವರಿಗೆ ಸೋಲಾಯ್ತು.
ಬಾದಾಮಿಯಲ್ಲಿ ನಾನು ಒಂದು ದಿನ ಹೋಗಿದ್ರೆ ಅವರು ಅಲ್ಲಿಯೂ ಸೋಲು ಅನುಭವಿಸುತ್ತಿದ್ದರು. ಮೊದಲು ಅವರ ಕ್ಷೇತ್ರ ಯಾವುದು ಎಂದು ಹುಡುಕಿಕೊಳ್ಳಲಿ ಎಂದು ಟಾಂಗ್ ನೀಡಿದರು.