ಜ್ವರದ ನಡುವೆ ಬೆಳಗಾವಿಯಲ್ಲಿ ಬಿಎಸ್ ವೈ ಮತಬೇಟೆ
ಬೆಳಗಾವಿ : ಜ್ವರದ ನಡುವೆಯೂ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಬೆಳಗಾವಿಯಲ್ಲಿ ಭರ್ಜರಿ ಮತಬೇಟೆ ನಡೆಸಿದ್ದಾರೆ.
ಬೆಳಗಾವಿ ಉಪಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಸಿಎಂ ಬಿಎಸ್ ವೈ ತಮ್ಮ ಪಕ್ಷ ಅಭ್ಯರ್ಥಿ ಪರ ರೋಡ್ ಶೋ ನಡೆಸಿದರು.
ಬುಧವಾರದಿಂದಲೂ ಜ್ವರದಿಂದ ಬಳಲುತ್ತಿರುವ ಅವರು, ಚಿಕಿತ್ಸೆ ಪಡೆದು ಮಾತ್ರೆ ಸೇವಿಸಿ ಪ್ರಚಾರ ಮುಂದುವರಿಸಿದರು.
ಗುರುವಾರ ಬೆಳಿಗ್ಗೆ ಇಲ್ಲಿನ ನಾಗನೂರು ರುದ್ರಾಕ್ಷಿಮಠ ಮತ್ತು ಹುಕ್ಕೇರಿ ಹಿರೇಮಠಕ್ಕೆ ಭೇಟಿ ನೀಡಿ ಅಲ್ಲಿನ ಶ್ರೀಗಳಿಂದ ಆಶೀರ್ವಾದ ಪಡೆದರು.
ಹುಕ್ಕೇರಿ ಹಿರೇಮಠದಲ್ಲಿ ಕೆಲವು ಪ್ರಮುಖ ಸ್ವಾಮೀಜಿಗಳೊಂದಿಗೆ ಗೋಪ್ಯ ಸಭೆ ನಡೆಸಿ, ಚುನಾವಣೆಯಲ್ಲಿ ಬೆಂಬಲಿಸುವಂತೆ ಕೋರಿದರು.
ಬಳಿಕ ಎಸ್‍ಪಿಎಂ ರಸ್ತೆಯಲ್ಲಿರುವ ಶಿವಾಜಿ ಉದ್ಯಾನಕ್ಕೆ ಭೇಟಿ ನೀಡಿ, ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ನಂತರ, ತೆರೆದ ವಾಹನದಲ್ಲಿ ರೋಡ್ ಷೋ ನಡೆಸಿ ಮತ ಯಾಚಿಸಿದರು.










