ಕಾಂಗ್ರೆಸ್ ಪಕ್ಷ 60 ವರ್ಷ ದೇಶಕ್ಕೆ ಶಾಪವಾಗಿತ್ತು : ರಾಮುಲು
ಗದಗ : ಕಾಂಗ್ರೆಸ್ ಪಕ್ಷ ಕಳೆದ 60 ವರ್ಷ ರಾಜ್ಯಕ್ಕೆ ಮಾತ್ರವಲ್ಲದೇ ಇಡೀ ದೇಶಕ್ಕೆ ಶಾಪವಾಗಿತ್ತು ಎಂದು ಸಚಿವ ಬಿ.ಶ್ರೀರಾಮುಲು ಕಿಡಿಕಾರಿದ್ದಾರೆ.
ಗದಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ ಶ್ರೀರಾಮುಲು, ರಾಜ್ಯದಲ್ಲಿ ಬಿಜೆಪಿ ಸರಕಾರ ಬಂದ ನಂತರ ರಾಜ್ಯಕ್ಕೆ ಶಾಪ ಎಂದು ಕಾಂಗ್ರೆಸ್ ನಾಯಕರು ಹೇಳುತ್ತಿದ್ದಾರೆ.
ಆದರೆ ಕಾಂಗ್ರೆಸ್ ಪಕ್ಷ 60 ವರ್ಷ ರಾಜ್ಯಕ್ಕೆ ಅಷ್ಟೇ ಅಲ್ಲ ಇಡೀ ದೇಶಕ್ಕೆ ಶಾಪವಾಗಿತ್ತು. ಆ ಶಾಪದಿಂದ ಮುಕ್ತಿಯಾಗಿ ದೇಶದಲ್ಲಿ ನರೇಂದ್ರ ಮೋದಿಯವರ ಸರಕಾರ ಬಂದಿದೆ ಎಂದು ಹೇಳಿದರು.
ಇದೇ ವೇಳೆ ಮೈಸೂರು ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿ, ಕಾಂಗ್ರೆಸ್ ನವರು ತನಿಖೆಗೆ ಪ್ರತ್ಯೇಕ ಸಮಿತಿ ರಚನೆ ಮಾಡಿದ್ದಾರೆ.
ಮಹಿಳೆಯರಿಗೆ ರಕ್ಷಣೆ ಕೊಡುವಲ್ಲಿ ನಮ್ಮ ಸರಕಾರ ಬದ್ಧವಾಗಿದೆ ಎಂದು ರಾಮುಲು ಭರವಸೆ ನೀಡಿದರು.









