B Sriramualu | ಸಿದ್ದರಾಮಯ್ಯ ಪರಿಸ್ಥಿತಿ ನೆನಪಿಸಿಕೊಂಡ್ರೆ ನೋವಾಗುತ್ತೆ
ಬಳ್ಳಾರಿ : ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಪರಿಸ್ಥಿತಿ ನೋಡಿದ್ರೆ ನೋವಾಗುತ್ತಿದೆ ಎಂದು ಸಚಿವ ಬಿ.ಶ್ರೀರಾಮುಲು ವ್ಯಂಗ್ಯವಾಡಿದ್ದಾರೆ.
ಸ್ವಾಮೀಜಿಗಳ ಬಗ್ಗೆ ಸಿದ್ದರಾಮಯ್ಯ ನೀಡಿದ ಹೇಳಿಕೆ ಬಗ್ಗೆ ಬಳ್ಳಾರಿಯಲ್ಲಿ ಮಾತನಾಡಿದ ಬಿ.ಶ್ರೀರಾಮುಲು, ಸದ್ಯ ಸಿದ್ದರಾಮಯ್ಯನವರ ಪರಿಸ್ಥಿತಿ ತುಘಲಕ್ ರೀತಿ ಆಗಿದೆ. ಅವರಿಗೆ ನಾಲಿಗೆ ಮೇಲೆ, ಮಾತುಗಳ ಮೇಲೆ ಹಿಡಿತ ಇಲ್ಲ.
ಸಿದ್ದರಾಮಯ್ಯನವರು ರಾಜಕಾರಣಕ್ಕಾಗಿ ಗುರು ಪರಂಪರೆಯನ್ನು ಅವಮಾನ ಮಾಡಿದ್ದಾರೆ. ಸ್ವಾಮೀಜಿಗಳಿಗೆ ಅಪಮಾನ ಮಾಡಿರುವ ಸಿದ್ದರಾಮಯ್ಯನವರು ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ.
ಇದೇ ವೇಳೆ ಕಾಂಗ್ರೆಸ್ ನಲ್ಲಿ ಕಚ್ಚಾಟ ನಡೆಯುತ್ತಿದೆ ಎಂದ ರಾಮುಲು, ಇತ್ತಿಚೆಗೆ ಸಿದ್ದರಾಮಯ್ಯನವರ ಆತ್ಮವಿಶ್ವಾಸ ಕಡಿಮೆ ಆಗಿದೆ. ಸಿದ್ದರಾಮಯ್ಯ ಖಿನ್ನತೆಯಲ್ಲಿದ್ದಂತೆ ಕಾಣುತ್ತದೆ.
ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಏಕಾಂಗಿಯಾಗಿದ್ದಾರೆ. ಕಾಂಗ್ರೆಸ್ ಪಕ್ಷದ ವ್ಯವಸ್ಥೆ 2-3 ತುಂಡು ಆಗಿದೆ. ಸಿದ್ದರಾಮಯ್ಯ ಕಡೆ ಹೋದರೆ ಡಿಕೆಶಿಗೆ ಸಿಟ್ಟು. ಡಿಕೆಶಿಗೆ ಕಡೆ ಹೋದರೆ ಸಿದ್ದರಾಮಯ್ಯಗೆ ಸಿಟ್ಟು ಬರುತ್ತದೆ ಎಂದು ವ್ಯಂಗ್ಯವಾಡಿದ್ದಾರೆ.
ಸಿದ್ದರಾಮಯ್ಯ ಸ್ವಾಮೀಜಿಗಳು ಪೇಟಾ ಹಾಕಲ್ವಾ ಎಂದು ಸದನದಲ್ಲಿ ಹೇಳಿದ್ದು, ಭಾರಿ ಚರ್ಚೆಗೆ ಗುರಿಯಾಗಿದೆ. ಬಿಜೆಪಿ ನಾಯಕರು ಈ ಹೇಳಿಕೆಯನ್ನ ಮುಂದೆ ಹಿಟ್ಟುಕೊಂಡು ಸಿದ್ದರಾಮಯ್ಯ ವಿರುದ್ಧ ಮುಗಿಬಿದ್ದಿದ್ದಾರೆ.