ವಿಜಯೇಂದ್ರಗೆ ಮಹತ್ವದ ಜವಾಬ್ದಾರಿ ಕೊಟ್ಟ ಹೈಕಮಾಂಡ್
ಬೆಂಗಳೂರು : ರಾಜ್ಯದಲ್ಲಿ ಸಚಿವ ಸಂಪುಟ ರಚನೆಯಾಗಿದೆ. ಇದರಲ್ಲಿ ಬಿ.ಎಸ್.ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರ ಅವರಿಗೆ ಸ್ಥಾನ ಸಿಕ್ಕಿಲ್ಲ.
ಇದು ಸಾಮಾನ್ಯವಾಗಿಯೇ ಬಿಎಸ್ ವೈ ಅಭಿಮಾನಿಗಳಿಗೆ ನಿರಾಸೆಯನ್ನುಂಟು ಮಾಡಿದೆ. ಆದ್ರೆ ಪಕ್ಷದ ಹೈಕಮಾಂಡ್ ವಿಜಯೇಂದ್ರ ಅವರಿಗೆ ಮಹತ್ವದ ಜವಾಬ್ದಾರಿಯನ್ನು ಕೊಟ್ಟಿದೆ.
ಈ ಬಗ್ಗೆ ಸ್ವತಃ ಬಿ ವೈ ವಿಜಯೇಂದ್ರ ಅವರೇ ಮಾಹಿತಿ ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಪಕ್ಷದ ಉಪಾಧ್ಯಕ್ಷನಾಗಿ ಇಡೀ ರಾಜ್ಯ ಸುತ್ತಬೇಕಿದೆ.
ವಿಶೇಷವಾಗಿ ಹಳೆ ಮೈಸೂರು ಭಾಗದಲ್ಲಿ ಸುತ್ತಬೇಕು. ಇದನ್ನು ರಾಷ್ಟ್ರೀಯ ಅಧ್ಯಕ್ಷರೇ ಹೇಳಿದ್ದಾರೆ ಎಂದು ತಿಳಿಸಿದ್ದಾರೆ.
ಆ ಮೂಲಕ ಹಳೆ ಮೈಸೂರು ಭಾಗದಲ್ಲಿ ಬಿಜೆಪಿಯನ್ನು ಕಟ್ಟಿ ಬೆಳೆಸುವ ಜವಾಬ್ದಾರಿಯನ್ನು ಹೈಕಮಾಂಡ್ ವಿಜಯೇಂದ್ರಗೆ ಕೊಟ್ಟಿದೆ.
ಇದೇ ವೇಳೆ ವರುಣಾ ಕ್ಷೇತ್ರದಿಂದ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ ಅವರು, ನನ್ನನ್ನು ಗುರುತಿಸಿರುವ ಕ್ಷೇತ್ರ ವರುಣಾ, ನಾನು ಅಲ್ಲಿಗೆ ಹೆಚ್ಚು ಒತ್ತು ಕೊಡುತ್ತೇನೆ. ಆದರೆ ಟಿಕೆಟ್ ಕೊಡೋದು ಬಿಡೋದು ವರಿಷ್ಠರಿಗೆ ಬಿಟ್ಟಿದ್ದು ಎಂದು ವಿಜಯೇಂದ್ರ ಹೇಳಿದ್ದಾರೆ.