ತುಮಕೂರು : ಶಿರಾ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಪರ ಅಲೆ ಎದ್ದಿದೆ. ಹೀಗಾಗಿ ವಿರೋಧ ಪಕ್ಷಗಳಿಗೆ ಸೋಲಿನ ಭೀತಿ ಹುಟ್ಟಿದೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ( B Y Vijayendra ) ಹೇಳಿದ್ದಾರೆ.
ವಿಜಯೇಂದ್ರ ಇಂದು ಚಿತ್ರದುರ್ಗದ ಮಾದಾರ ಚೆನ್ನಯ್ಯ ಗುರುಪೀಠಕ್ಕೆ ಭೇಟಿ ನೀಡಿ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಅವರ ಆಶೀರ್ವಾದ ಪಡೆದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಜಯೇಂದ್ರ ಅಕ್ರಮ ಹಣ ಸುರಿದು ಶಿರಾ ಕ್ಷೇತ್ರದ ಚುನಾವಣೆ ಮಾಡುತ್ತಿದ್ದಾರೆ ಎಂಬ ಎಚ್.ಡಿ. ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿದರು.
ಇದನ್ನೂ ಓದಿ : ಅಧಿಕಾರ ದುರ್ಬಳಕೆ ಪ್ರಶ್ನೆಗಳಿಗೆ ಮೊದಲು ಹೆಚ್ ಡಿಕೆ ಉತ್ತರಿಸಲಿ : ಅಶ್ವಥ್ ನಾರಾಯಣ
ಸೋಲಿನ ಭೀತಿಯಿಂದ ವಿರೋಧ ಪಕ್ಷದವರು ಆಧಾರರಹಿತವಾಗಿ ಮಾತನಾಡುತ್ತಿದ್ದಾರೆ. ಕ್ಷೇತ್ರದ ಮತದಾರರು ಬದಲಾವಣೆ ಬಯಸಿದ್ದಾರೆ.
ಬಿಜೆಪಿಯನ್ನು ಅಧಿಕಾರಕ್ಕೆ ತರುವ ವಿಶ್ವಾಸ ಪಕ್ಷದ ಕಾರ್ಯಕರ್ತರಲ್ಲಿದೆ. ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸ ಆಗಬೇಕು ಎಂಬ ಬಯಕೆಯನ್ನು ಆ ಕ್ಷೇತ್ರದ ಜನರು ವ್ಯಕ್ತಪಡಿಸಿದ್ದಾರೆ.
ಅಭಿವೃದ್ಧಿ ಆಧಾರದ ಮೇಲೆ ಚುನಾವಣೆ ಎದುರಿಸುತ್ತಿದ್ದೇವೆ ಎಂದು ವಿಜಯೇಂದ್ರ ತಿಳಿಸಿದ್ದಾರೆ.
ಇದನ್ನೂ ಓದಿ : ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್ ಒಬ್ಬ ಕಾಡು ಮನುಷ್ಯ, ಪೋಕರಿ : ಸಿದ್ದರಾಮಯ್ಯ
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel