ವಿಜಯಾನಂದ ಕಾಶಪ್ಪನವರ್ ವಿರುದ್ಧ ಸಿಎಂ ಪುತ್ರ ಏಕವಚನ ಪ್ರಯೋಗ
ಮೈಸೂರು : ಕಾಶಪ್ಪನವರ್ ಅಂದ್ರೆ ಯಾರು..? ಮಾಜಿ ಶಾಸಕನಾ ಅಥವಾ ಬಾರಲ್ಲಿ ಕುಳಿತು ಗಲಾಟೆ ಮಾಡಿಕೊಂಡನಲ್ಲ ಅವನಾ..? ಎಂದು ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ ವಿರುದ್ಧ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.
ಸಿಎಂ ಪುತ್ರ ವಿಜಯೇಂದ್ರ 300 ಕ್ಕೂ ಹೆಚ್ಚು ಪೂಜ್ಯರನ್ನು ಸೇರಿಸಿ ನಮ್ಮ ಹೋರಾಟವನ್ನು ಹತ್ತಿಕ್ಕುವ ಪ್ರಯತ್ನ ಮಾಡುತ್ತಿದ್ದಾರೆ. ಸ್ವಾಮೀಜಿಗಳ ಮೂಲಕ ಪಂಚಮಸಾಲಿಗೆ ಮೀಸಲಾತಿ ಕೊಡಬಾರದೆಂದು ಒತ್ತಡ ಹೇರುವ ಕೆಲಸ ನಡೆಯುತ್ತಿದೆ ಎಂಬ ಕಾಶಪ್ಪನವರ್ ಆರೋಪಕ್ಕೆ ಮೈಸೂರಿನಲ್ಲಿ ಪ್ರತಿಕ್ರಿಯೆ ನೀಡಿದ ವಿಜಯೇಂದ್ರ, ಕಾಶಪ್ಪನವರ್ ಅಂದ್ರೆ ಯಾರು.. ಮಾಜಿ ಶಾಸಕನಾ ಅಥವಾ ಬಾರಲ್ಲಿ ಕುಳಿತು ಗಲಾಟೆ ಮಾಡಿಕೊಂಡನಲ್ಲ ಅವನಾ ಎಂದು ಕುಟುಕಿದರು.
ಎಲ್ಲ ಸಮುದಾಯಗಳಿಗೂ ಮೀಸಲಾತಿ ಕೇಳುವ ಹಕ್ಕಿದೆ. ಸವಾಲುಗಳನ್ನೂ ನಿಬಾಯಿಸುವ ಶಕ್ತಿ ಯಡಿಯೂರಪ್ಪ ಅವರಿಗೆ ಇದೆ. ಯಾರೋ ಹಾದಿ ಬೀದಿಯಲ್ಲಿ ನಿಂತು ಏನೇನೋ ಹೇಳಿಕೆ ನೀಡಬಾರದು. ಯಾರ ಯೋಗ್ಯತೆ ಏನು ಎಂಬುದು ಎಲ್ಲರಿಗೂ ಗೊತ್ತಿದೆ. ನಾನು ಪಕ್ಷದ ಉಪಾಧ್ಯಕ್ಷನಾಗಿ ನನ್ನ ಇತಿಮಿತಿಯಲ್ಲಿ ಕೆಲಸ ಮಾಡುತ್ತಿದ್ದೇನೆ.
ಯಾವ ಹೋರಾಟವನ್ನೂ ದಿಕ್ಕುತಪ್ಪಿಸುವ ಕೆಲಸ ಮಾಡಿಲ್ಲ. ಅದು ನನಗೆ ಸಂಬಂಧಪಟ್ಟ ವಿಚಾರವೂ ಅಲ್ಲ. ಯಡಿಯೂರಪ್ಪ ಅವರು ಯಾವ ಸಮುದಾಯವನ್ನೂ ಹೊಡೆಯುವುದಿಲ್ಲ. ಎಲ್ಲರಿಗೂ ನ್ಯಾಯ ದೊರಕಿಸುವ ಶಕ್ತಿ, ರಾಜಕೀಯ ಅನುಭವ ಅವರಿಗೆ ಇದೆ ಎಂದು ಹೇಳಿದರು.
ಶ್ರೀ ಕಟೀಲು ದುರ್ಗಾಪರಮೇಶ್ವರೀ ಕ್ಷೇತ್ರ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564
ಇನ್ನು ಮೀಸಲಾತಿ ಹೋರಾಟಗಳು ರಾಜಕೀಯ ಲಾಭಕ್ಕೆ ಬಳಕೆ ಆಗುತ್ತಿದೆ ಎಂದು ಆರೋಪಿಸಿದ ವಿಜಯೇಂದ್ರ, ಸ್ವಾಮೀಜಿಗಳು ಮೀಸಲಾತಿ ಹೋರಾಟ ಮಾಡುವುದಕ್ಕೆ ನಮ್ಮ ತಕರಾರು ಇಲ್ಲ. ತಮ್ಮ ಸಮುದಾಯಗಳ ಪರವಾಗಿ ಹೋರಾಟ ಮಾಡುವುದು ಸರಿಯಾಗಿಯೇ ಇದೆ. ಆದರೆ ಕೆಲವರು ಮೀಸಲಾತಿ ಹೋರಾಟವನ್ನು ರಾಜಕೀಯಕ್ಕೆ ಬಳಸಿಕೊಳ್ಳುತ್ತಿದ್ದಾರೆ. ಇದು ಬೇಸರದ ಸಂಗತಿ ಎಂದು ದೂರಿದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








