ಬೆಂಗಳೂರು : ಬಾಬ್ರಿ ಮಸೀದಿ ಧ್ವಂಸ ಪ್ರಕರಣ ಸಂಬಂಧ ಸಿಬಿಐ ವಿಶೇಷ ನ್ಯಾಯಾಲಯದ ತೀರ್ಪು ದುರದೃಷ್ಟಕರ ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.
ತೀರ್ಪಿನ ಕುರಿತು ಸರಣಿ ಟ್ವೀಟ್ ಗಳನ್ನು ಮಾಡಿರುವ ಸಿದ್ದರಾಮಯ್ಯ, ಬಾಬರಿ ಮಸೀದಿ ಧ್ವಂಸ ಪ್ರಕರಣದ 32 ಆರೋಪಿಗಳನ್ನು ಖುಲಾಸೆಗೊಳಿಸಿರುವ ಸಿಬಿಐ ವಿಶೇಷ ನ್ಯಾಯಾಲಯದ ತೀರ್ಪು ದುರದೃಷ್ಟಕರ.
ನ್ಯಾಯಾಲಯ 2019 ರ ಸುಪ್ರೀಂ ಕೋರ್ಟ್ ತೀರ್ಪು ಮತ್ತು ಸಂವಿಧಾನದ ಆಶಯಗಳನ್ನು ಗಮನಕ್ಕೆ ತೆಗೆದುಕೊಂಡ ಹಾಗೆ ಕಾಣುತ್ತಿಲ್ಲ.
ಇದನ್ನೂ ಓದಿ : ತಮ್ಮ ಕುಟುಂಬಸ್ಥರು ನಡೆಸಿರೋ ಭ್ರಷ್ಟಾಚಾರದ ಬಗ್ಗೆ ತನಿಖೆಗೆ ಸಿಎಂ ಸಿದ್ಧರಿಲ್ಲ : ಸಿದ್ದರಾಮಯ್ಯ
‘ಬಾಬರಿ ಮಸೀದಿ ಧ್ವಂಸ ನೆಲದ ಕಾನೂನಿಗೆ ವಿರುದ್ಧವಾದ ಕೃತ್ಯ’ ಎಂದು 2019 ನವೆಂಬರ್ 9 ರ ಸುಪ್ರಿಂ ಕೋರ್ಟ್ ತೀರ್ಪು ಹೇಳಿದೆ.
ಈಗ ಸಿಬಿಐ ವಿಶೇಷ ನ್ಯಾಯಾಲಯ ಎಲ್ಲ ಆರೋಪಿಗಳನ್ನು ಖುಲಾಸೆಗೊಳಿಸಿದೆ. ಬಾಬರಿ ಮಸೀದಿ ಧ್ವಂಸ ಮಾಡಿದವರು ಯಾರೆಂಬ ಪ್ರಶ್ನೆ ಹಾಗೆಯೇ ಉಳಿದಿದೆ.
ಕೇಂದ್ರ ಮತ್ತು ಉತ್ತರ ಪ್ರದೇಶ ಸರ್ಕಾರಗಳು ಸಿಬಿಐ ವಿಶೇಷ ನ್ಯಾಯಾಲಯದ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಿ ಬಾಬರಿ ಮಸೀದಿ ಧ್ವಂಸ ಮಾಡಿದ ಅಪರಾಧಿಗಳನ್ನು ಶಿಕ್ಷೆಗೊಳಪಡಿಸಬೇಕು ಎಂದು ಸಲಹೆ ನೀಡಿದ್ದಾರೆ.
ಬಾಬರಿ ಮಸೀದಿ ಧ್ವಂಸ ಪ್ರಕರಣದ 32 ಆರೋಪಿಗಳನ್ನು ಖುಲಾಸೆಗೊಳಿಸಿರುವ ಸಿಬಿಐ ವಿಶೇಷ ನ್ಯಾಯಾಲಯದ ತೀರ್ಪು ದುರದೃಷ್ಟಕರ.
ನ್ಯಾಯಾಲಯ 2019ರ ಸುಪ್ರೀಮ್ ಕೋರ್ಟ್ ತೀರ್ಪು ಮತ್ತು ಸಂವಿಧಾನದ ಆಶಯಗಳನ್ನು ಗಮನಕ್ಕೆ ತೆಗೆದುಕೊಂಡ ಹಾಗೆ ಕಾಣುತ್ತಿಲ್ಲ.
1/3#BabriDemolitionCase— Siddaramaiah (@siddaramaiah) September 30, 2020








