ಶಿವಮೊಗ್ಗ : ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಸಿಬಿಐ ವಿಶೇಷ ಕೋರ್ಟ್ ನೀಡಿದ ತೀರ್ಪು ಮಥುರೆಯಲ್ಲಿ ಶ್ರೀಕೃಷ್ಣ ಮಂದಿರ ನಿರ್ಮಾಣಕ್ಕೆ ಸ್ಫೂರ್ತಿ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
ಇಂದಿನ ತೀರ್ಪಿನ ಬಗ್ಗೆ ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ, ಯಾವುದೋ ದೇಶದಿಂದ ಬಂದ ಬಾಬರ್ ರಾಮ ಮಂದಿರ ಕೆಡವಿ ಮಸೀದಿ ನಿರ್ಮಾಣವಾದಾಗ ಗುಲಾಮರ ಸಂಕೇತದಂತೆ ನಮ್ಮನ್ನು ಕೆಣಕುತ್ತಿತ್ತು.
ಆದರೆ ಈ ತೀರ್ಪು ನೀನು ಗುಲಾಮನಲ್ಲವೆಂದು ನೀಡಿದೆ. ಬಾಬರಿ ಮಸೀದಿ ಪ್ರಕರಣದ ಹೋರಾಟದಲ್ಲಿದ್ದ 32 ಜನರಿಗೆ ಕೋರ್ಟ್ ಖುಲಾಸೆ ಮಾಡಿರುವುದು ರಾಷ್ಟ್ರೀಯವಾದಿಗಳಿಗೆ ಸಂತಸದ ದಿನ.
ಸ್ವತಂತ್ರ ಭಾರತದಲ್ಲಿ ನಮ್ಮ ಶ್ರದ್ಧಾ ಮಂದಿರಗಳ ಪರ ಹೋರಾಟ ಮಾಡಲು ಇಂದಿನ ತೀರ್ಪು ಸ್ಫೂರ್ತಿದಾಯಕವಾಗಿದೆ ಎಂದು ಅಭಿಪ್ರಾಯಪಟ್ಟರು.
ಇದನ್ನೂ ಓದಿ : ಇವತ್ತು ಭಾರತ ನ್ಯಾಯಾಂಗದಲ್ಲಿ ಕರಾಳ ದಿನ : ಓವೈಸಿ
ಈ ಮಸೀದಿ ಕೆಡವಿ ರಾಮಮಂದಿರ ಕಟ್ಟಬೇಕು ಎಂಬುದು ರಾಷ್ಟ್ರೀಯವಾದಿಗಳ ತೀರ್ಮಾನವಾಗಿತ್ತು. ಈ ತೀರ್ಪು ಕೇವಲ ಅಯೋಧ್ಯೆಗೆ ಮಾತ್ರ ಸೀಮಿತವಾಗಿಲ್ಲ.
ಮಥುರಾದಲ್ಲಿಯೂ ಶ್ರೀಕೃಷ್ಣನ ದೇವಾಲಯ ಕೆಡವಿ ಮಸೀದಿ ನಿರ್ಮಿಸಲಾಗಿದೆ. ಅಲ್ಲಿಯೂ ಶ್ರೀಕೃಷ್ಣನ ದೇವಾಲಯ ನಿರ್ಮಾಣಕ್ಕೆ ಈ ತೀರ್ಪು ಪ್ರೇರಣೆಯಾಗಿದೆ ಎಂದರು.








