ರಾಜ್ಯ ಶಾಲಾ ಶಿಕ್ಷಕಿಯರಿಗೆ ಗುಡ್ ನ್ಯೂಸ್ – ಶಿಶು ಪಾಲನಾ ರಜೆ ಮುಂಜೂರು..!
ಬೆಂಗಳೂರು : ರಾಜ್ಯದ ಶಾಲಾ ಶಿಕ್ಷಕಿಯರಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದೆ.. ಸರ್ಕಾರಿ ಶಾಲಾ ಶಿಕ್ಷಕಿಯರಿಗೆ ಶಿಶುಪಾಲನಾ ರಜೆ ಸೌಲಭ್ಯ ಶೀಘ್ರವೇ ಮಂಜೂರಾಗಲಿದೆ. ಈ ಮೂಲಕ ಶಿಶುಪಾಲನಾ ರಜೆ ಮಂಜೂರು ಮಾಡುವಂತೆ ಶಿಕ್ಷಕಿಯರ ಮನವಿಯನ್ನ ಪರಸ್ಕರಿಸಲಾಗಿದೆ.. ಶೈಕ್ಷಣಿಕ ಚಟುವಟಿಕೆಗಳಿಗೆ ತೊಂದರೆಯಾಗದಂತೆ ಸರ್ಕಾರಿ ಶಿಕ್ಷಕರಿಗೆ ಶಿಶುಪಾಲನಾ ರಜೆ ನೀಡಬಹುದು ಎಂದು ಆರ್ಥಿಕ ಇಲಾಖೆ ತಿಳಿಸಿದೆ. ಶಿಕ್ಷಕಿಯರ ಮನವಿಗೆ ಸ್ಪಂದಿಸಿರುವ ಅರ್ಥಿಕ ಇಲಾಖೆ ಇದೀಗ ಶಿಶುಪಾಲನಾ ರಜೆ ಮಂಜೂರು ಮಾಡಿದೆ.
2011 ರಲ್ಲಿ ಬುದ್ದಿಮಾಂಧ್ಯ ಮತ್ತು ವಿಶೇಷಚೇತನ ಮಕ್ಕಳನ್ನು ನೋಡಿಕೊಳ್ಳಲು ರಾಜ್ಯ ಸರ್ಕಾರ ಮಹಿಳಾ ನೌಕರರಿಗೆ ವೈದ್ಯಕೀಯ ಮಂಡಳಿ ಪ್ರಮಾಣ ಪತ್ರದ ಆಧಾರದ ಮೇಲೆ ಒಂದು ವರ್ಷದಲ್ಲಿ 3 ಕಂತುಗಳಿಗೆ ಮೀರದಂತೆ ಹಾಗೂ 15 ದಿನಗಳಿಗೆ ಕಡಿಮೆಯಿಲ್ಲದಂತೆ ಇಡೀ ಸೇವಾವಧಿಯಲ್ಲಿ 2 ವರ್ಷಗಳ ಅವಧಿಗೆ ಶಿಶುಪಾಲನಾ ರಜೆಯನ್ನು ಮಂಜೂರು ಮಾಡಿತ್ತು. ಇದೀಗ ಇದೇ ಮಾದರಿಯಲ್ಲಿ ಶೈಕ್ಷಣಿಕ ಚಟುವಟಿಕೆಗಳಿಗೆ ತೊಂದರೆಯಾಗದಂತೆ ಸರ್ಕಾರಿ ಶಿಕ್ಷಕರಿಗೆ ಶಿಶುಪಾಲನಾ ರಜೆ ನೀಡಬಹುದು ಎಂದು ಆರ್ಥಿಕ ಇಲಾಖೆ ತಿಳಿಸಿದೆ.