ಉಡುಪಿ: ಹೆರಿಗೆ ಸಂದರ್ಭದಲ್ಲಿ ಹೊಕ್ಕಳು ಬಳ್ಳಿ ಸುತ್ತಿ ಮಗು ಸಾವನ್ನಪ್ಪಿರುವ ಘಟನೆ ಕುಂದಾಪುರ ಸರ್ಕಾರಿ ಆಸ್ಪತ್ರೆ ಎದುರು ನಡೆದಿದೆ.
ಈ ಹಿನ್ನೆಲೆಯಲ್ಲಿ ಕುಟುಂಬಸ್ಥರು ಅಹೋ ರಾತ್ರಿ ಪ್ರತಿಭಟನೆ ನಡೆಸಿದರು. ಬೈಂದೂರಿನ ಗಂಗೊಳ್ಳಿ ಮೂಲದ ಶ್ರೀನಿವಾಸ ಖಾರ್ವಿ ಮತ್ತು ಜ್ಯೋತಿ ದಂಪತಿಯ ಮಗು ಹೆರಿಗೆ ಸಂದರ್ಭದಲ್ಲಿಯೇ ಸಾವನ್ನಪ್ಪಿದೆ. ವೈದ್ಯರ ನಿರ್ಲಕ್ಷ್ಯದಿಂದ ಮಗು ಸಾವನ್ನಪ್ಪಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನ. 17ರಂದು ಹೆರಿಗೆ ನೋವಿನಿಂದ ಜ್ಯೋತಿ ಕುಂದಾಪುರ ತಾಲೂಕಿನ ಸರ್ಕಾರಿ ಹೆರಿಗೆ ಆಸ್ಪತ್ರೆಗೆ ದಾಖಲಾಗಿದ್ದರು. ಹೆರಿಗೆ ಮಾಡಿಸಿದ ವೈದ್ಯರು ಮಗು ಮೃತಪಟ್ಟಿದೆ ಎಂದು ತಿಳಿಸಿದ್ದು, ಕುಟುಂಬ ನೋವಿನಿಂದ ಆಕ್ರೋಶಗೊಂಡಿದೆ. ಯಾವುದೇ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳದ ಹೆರಿಗೆ ಮಾಡಿಸಲಾಗಿದೆ ಎಂದು ಕುಟುಂಬ ಆರೋಪಿಸಿದ್ದು, ಡಿಸಿ ಸೂಕ್ತ ತನಿಖೆ ನಡೆಸುವ ಭರವಸೆ ನೀಡಿದ್ದಾರೆ.