ಚಾಮರಾಜನಗರ: ಜಮೀನಿನ ತಂತಿ ಬೇಲಿಗೆ ಹರಿಸಲಾಗಿದ್ದ ವಿದ್ಯುತ್ ಸ್ಪರ್ಶಿಸಿ ಆನೆ ಮರಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಕಾಡಂಚಿನ ಜಕ್ಕಳ್ಳಿ ಎಂಬಲ್ಲಿ ಈ ಘಟನೆ ನಡೆದಿದೆ. ಜಮೀನಿಗೆ ಸುತ್ತ ಹಾಕಿದ್ದ ತಂತಿ ಬೆಲೆಗೆ ರೈತರು ವಿದ್ಯುತ್ ಹರಿಸಿದ್ದರು. ಜಮೀನಿನೊಳಗೆ ನುಗ್ಗಲು ಯತ್ನಿಸಿದ ಮರಿ ಆನೆ ವಿದ್ಯುತ್ ಶಾಕ್ ನಿಂದ ಸಾವನ್ನಪ್ಪಿದೆ.
ಶರಿಯರ್ ಖಾನ್ ಎಂಬ ವ್ಯಕ್ತಿಗೆ ಸೇರಿದ ಜಮೀನಿನ ತಂತಿ ಬೇಲಿಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ನೀಡಲಾಗಿತ್ತು. ಆಹಾರ ಅರಸಿ ಬಂದ ಆನೆ, ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿದೆ. ಸದ್ಯ ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು, ಜಮೀನು ಮಾಲೀಕ ಹಾಗೂ ಜಮೀನು ಗುತ್ತಿಗೆ ಪಡೆದಿದ್ದವರ ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.







