ಬೆಂಗಳೂರು: ಹೊಸಕೋಟೆಯ ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಅವರು ಶೀಘ್ರವೇ ಕಾಂಗ್ರೆಸ್ ಸೇರಲಿದ್ದಾರೆ ಎಂಬ ಚರ್ಚೆಗಳು ತಾರಕಕ್ಕೇರಿವೆ. ಈ ಬಗ್ಗೆ ಬಿಜೆಪಿ ಸಂಸದ ಹಾಗೂ ಶರತ್ ಬಚ್ಚೇಗೌಡ ಅವರ ತಂದೆ ಬಚ್ಚೇಗೌಡ ಅವರು ಪ್ರತಿಕ್ರಿಯೆ ನೀಡಿದ್ದಾರೆ. ನನ್ನ ಪುತ್ರ ಕಾಂಗ್ರೆಸ್ ಸೇರ್ಪಡೆ ಆಗವುದು ಆತನಿಗೆ ಬಿಟ್ಟದ್ದು ಎಂದು ಅಭಿಪ್ರಾಯಪಟ್ಟಿದ್ದಾರೆ.
ಶರತ್ ಬಚ್ಚೇಗೌಡ ಕಾಂಗ್ರೆಸ್ಗೆ ಸೇರ್ಪಡೆಯಾಗಲಿದ್ದಾರೆ ಎನ್ನುವ ಊಹಾಪೋಹಗಳಿಗೆ ಪ್ರತಿಕ್ರಿಯಿಸಿದ ಅವರು, ಅವರು ಭವಿಷ್ಯದಲ್ಲಿ ಯಾವ ತೀರ್ಮಾನ ತೆಗೆದುಕೊಳ್ಳುತ್ತಾರೆ ಎನ್ನುವ ಬಗ್ಗೆ ನಾನು ಮಾತನಾಡುವುದಿಲ್ಲ. ಅದು ಅವರಿಗೆ ಬಿಟ್ಟ ವಿಚಾರ ಎಂದು ಹೇಳಿದ್ದಾರೆ. ಅಲ್ಲದೇ ನಾನು ಶರತ್ ಬಚ್ಚೇಗೌಡಗೆ ಚುನಾವಣೆಯಲ್ಲಿ ಬೆಂಬಲ ನೀಡಿಲ್ಲ. ಭವಿಷ್ಯದ ರಾಜಕೀಯದ ಬಗ್ಗೆಯೂ ನಾನು ಮುನ್ಸೂಚನೆ ನೀಡುವುದಿಲ್ಲ ಎಂದು ತಿಳಿಸಿದರು..








