ಕಾಲೇಜು ದಿನಮಾನಗಳಲ್ಲಿ ವಿದ್ಯಾರ್ಥಿ ಜೀವನದಲ್ಲಿ ಆಗುವ ಘಟನೆಗಳನ್ನೇ ಆಧಾರವಾಗಿಟ್ಟುಕೊಂಡು ಕನ್ನಡದಲ್ಲಿ ಸಾಕಷ್ಟು ಚಿತ್ರಗಳು ಬಂದಿವೆ.
ಮನರಂಜನೆಯನ್ನೇ ಪ್ರಮುಖವಾಗಿಟ್ಟಿಕೊಂಡು ಕಾಲೇಜು ದಿನಗಳ ಕಥೆಯೊಂದು ಕನ್ನಡದಲ್ಲಿ ಬರುತ್ತಿದೆ. ಅದೇ ” ಬ್ಯಾಕ್ ಬೆಂಚರ್ಸ್ “. ಈಗಾಗಲೇ ಟೀಸರ್ ಮೂಲಕ ಪ್ರೇಕ್ಷಕರಿಗೆ ಕಚುಗುಳಿಯಿಟ್ಟಿರುವ “ಬ್ಯಾಕ್ ಬೆಂಚರ್ಸ್” ಚಿತ್ರ ತಂಡ, ಈಗ “ಯಲ್ಲೋ ಯಲ್ಲೋ” ಹಾಡಿನ ಮೂಲಕ ಅಭಿಮಾನಿಗಳಿಗೆ ಹತ್ತಿರವಾಗಿದೆ. ಈ ಹಾಡು ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಈ ಹಾಡಿಗೆ ಸಂಗೀತ ನಿರ್ದೇಶನ ಹಾಗೂ ಧ್ವನಿ ನಕುಲ್ ಅಭಯಂಕರ್ ಅವರದ್ದಿದೆ.
ಹಾಡು ಬಿಡುಗಡೆ ಮಾಡಿ ಮಾತನಾಡಿದ ನಿರ್ದೇಶಕ, ನಿರ್ಮಾಪಕ ಬಿ.ಆರ್ ರಾಜಶೇಖರ್, ಚಿತ್ರ ತೆರೆಗೆ ಬರಲು ಸಿದ್ದಾವಾಗಿದೆ. ಪ್ರಚಾರ ಕಾರ್ಯ ಆರಂಭಿಸಿದ್ದೇವೆ. ಮುಂದಿನ ತಿಂಗಳಲ್ಲಿ ಚಿತ್ರವನ್ನು ತೆರೆಗೆ ತರುವ ಪ್ರಯತ್ನ ನಡೆಯುತ್ತಿದೆ. ಚಿತ್ರದಲ್ಲಿ ಅಭಿನಯಿಸಿರುವ ಎಲ್ಲಾ ಕಲಾವಿದರು ಹೊಸಬರು. ಹೊಸತಂಡಕ್ಕೆ ನಿಮ್ಮ ಪ್ರೋತ್ಸಾಹವಿರಲಿ ಎಂದರು.
ಚಿತ್ರದಲ್ಲಿ ರಂಜನ್, ಜತಿನ್ ಆರ್ಯನ್, ಆಕಾಶ್ ಎಂ.ಪಿ, ಶಶಾಂಕ್ ಸಿಂಹ, ಮಾನ್ಯ ಗೌಡ, ಕುಂಕುಮ್ ಹೆಚ್, ಮನೋಜ್ ಶೆಟ್ಟಿ ಮುಂತಾದವರು ತಿಳಿಸಿದರು. ಛಾಯಾಗ್ರಾಹಕ ಮನೋಹರ್ ಜೋಶಿ “ಬ್ಯಾಕ್ ಬೆಂಚರ್ಸ್ ” ನ ಗುಣಗಾನ ಮಾಡಿದರು.
ರಂಜನ್, ಜತಿನ್ ಆರ್ಯನ್, ಆಕಾಶ್ ಎಂ.ಪಿ, ಶಶಾಂಕ್ ಸಿಂಹ, ಸುಚೇಂದ್ರ ಪ್ರಸಾದ್, ಅರವಿಂದ್ ಕುಪ್ಳೀಕರ್, ಮಾನ್ಯ ಗೌಡ, ಕುಂಕುಮ್ ಹೆಚ್, ಅನುಷಾ ಸುರೇಶ್, ವಿಯೋಮಿ ವನಿತಾ, ಮನೋಜ್ ಶೆಟ್ಟಿ, ನಮಿತಾ ಗೌಡ, ವಿಕಾಸ್, ರನ್ನ, ವಿಜಯ್ ಪ್ರಸಾದ್, ಚತುರ್ಥಿ ರಾಜ್, ಗೌರವ್ ಮುಂತಾದವರ ತಾರಾಬಳಗವಿರುವ ಈ ಚಿತ್ರಕ್ಕೆ ನಕುಲ್ ಅಭಯಂಕರ್ ಸಂಗೀತ ನಿರ್ದೇಶನ, ಮನೋಹರ್ ಜೋಶಿ ಛಾಯಾಗ್ರಹಣ, ರಂಜನ್ ಮತ್ತು ಅಮರ್ ಗೌಡ ಸಂಕಲನವಿದೆ.