ADVERTISEMENT
Wednesday, July 29, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ದೇಶ - ವಿದೇಶ

ಕೊಟ್ಟ ಮಾತು ತಪ್ಪಿದ್ರೆ ನಿಮ್ಮ ವಿರುದ್ಧವೂ ಬೀದಿಗಿಳಿದು ಹೋರಾಟ ಮಾಡುತ್ತೇವೆ: ವಿಪಕ್ಷ ನಾಯಕ ರಾಹುಲ್ ಗಾಂಧಿಗೆ ಸಿಜೆಪಿ ಸೆನ್ಸೇಷನ್ ಇರ್ಫಾನ್ ನೇರ ಎಚ್ಚರಿಕೆ

Shwetha by Shwetha
July 29, 2026
in ದೇಶ - ವಿದೇಶ, National, Newsbeat
Share on FacebookShare on TwitterShare on WhatsappShare on Telegram

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಯ ಮೂಲಕ ಇಡೀ ದೇಶದ ಗಮನ ಸೆಳೆದಿರುವ ಬೀದಿಬದಿ ವ್ಯಾಪಾರಿ ಮೊಹಮ್ಮದ್ ಇರ್ಫಾನ್ ಈಗ ವಿಪಕ್ಷ ನಾಯಕ ರಾಹುಲ್ ಗಾಂಧಿಯವರಿಗೇ ನೇರ ಎಚ್ಚರಿಕೆ ನೀಡುವ ಮೂಲಕ ಮತ್ತೆ ಸುದ್ದಿಯಾಗಿದ್ದಾರೆ. ಇತ್ತೀಚೆಗೆ ರಾಹುಲ್ ಗಾಂಧಿ ಅವರನ್ನು ಭೇಟಿಯಾದ ಇರ್ಫಾನ್, ಬಡವರ ಪರವಾಗಿ ಧ್ವನಿ ಎತ್ತುತ್ತಲೇ ರಾಜಕೀಯ ನಾಯಕರಿಗೆ ಇರಬೇಕಾದ ಬದ್ಧತೆಯ ಬಗ್ಗೆ ಖಡಕ್ ಮಾತುಗಳನ್ನು ಆಡಿದ್ದಾರೆ.

ಮಾತು ತಪ್ಪಿದರೆ ಹೋರಾಟ ಗ್ಯಾರಂಟಿ

Related posts

ಮುಖ್ಯಮಂತ್ರಿ ಸೂಚನೆಗೆ ಖಾಸಗಿ ಶಾಲೆಗಳ ಆಕ್ಷೇಪ; ಶಿಕ್ಷಣ ವಲಯದಲ್ಲಿ ಚರ್ಚೆ

ಮುಖ್ಯಮಂತ್ರಿ ಸೂಚನೆಗೆ ಖಾಸಗಿ ಶಾಲೆಗಳ ಆಕ್ಷೇಪ; ಶಿಕ್ಷಣ ವಲಯದಲ್ಲಿ ಚರ್ಚೆ

July 29, 2026
ಕನ್ನಡಿಗರ ತೆರಿಗೆ ಹಣದಲ್ಲಿ ಪೆರಿಯಾರ್ ಹೆಸರೇ? ಕನ್ನಡಪರ ಸಂಘಟನೆಗಳ ಉಗ್ರ ಹೋರಾಟಕ್ಕೆ ಮಣಿದ ಜಿಬಿಎ: ಭವನದ ಹೆಸರು ಇಂದಿರಾ ಗಾಂಧಿ ಕನ್ವೆನ್ಷನ್ ಹಾಲ್ ಎಂದು ಮರುನಾಮಕರಣ

ಕನ್ನಡಿಗರ ತೆರಿಗೆ ಹಣದಲ್ಲಿ ಪೆರಿಯಾರ್ ಹೆಸರೇ? ಕನ್ನಡಪರ ಸಂಘಟನೆಗಳ ಉಗ್ರ ಹೋರಾಟಕ್ಕೆ ಮಣಿದ ಜಿಬಿಎ: ಭವನದ ಹೆಸರು ಇಂದಿರಾ ಗಾಂಧಿ ಕನ್ವೆನ್ಷನ್ ಹಾಲ್ ಎಂದು ಮರುನಾಮಕರಣ

July 29, 2026

ರಾಹುಲ್ ಗಾಂಧಿ ಅವರೊಂದಿಗಿನ ಭೇಟಿಯ ವೇಳೆ ಇರ್ಫಾನ್ ಅತ್ಯಂತ ನಿಸ್ಸಂಕೋಚವಾಗಿ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ನೀವು ಈಗ ಭರವಸೆ ನೀಡುತ್ತಿದ್ದೀರಿ, ಆದರೆ ಅಧಿಕಾರಕ್ಕೆ ಬಂದ ಮೇಲೆ ಕೊಟ್ಟ ಮಾತು ತಪ್ಪಿದರೆ ನಾವು ಸುಮ್ಮನಿರುವುದಿಲ್ಲ. ನಿಮ್ಮ ವಿರುದ್ಧವೂ ಬೀದಿಗಿಳಿದು ಬೃಹತ್ ಹೋರಾಟ ಮಾಡುತ್ತೇವೆ ಎಂದು ಮುಖಕ್ಕೆ ಹೊಡೆದಂತೆ ಹೇಳಿದ್ದಾರೆ. ದೇಶದಲ್ಲಿ ದಿನಗೂಲಿ ಕಾರ್ಮಿಕರು ಎದುರಿಸುತ್ತಿರುವ ಆರ್ಥಿಕ ಸಂಕಷ್ಟ ಮತ್ತು ಹೆಚ್ಚುತ್ತಿರುವ ಆತ್ಮಹತ್ಯೆಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ ಇರ್ಫಾನ್, ಸರ್ಕಾರದ ದಾಖಲೆಗಳಲ್ಲಿ ಕನಿಷ್ಠ ವೇತನ 18,000 ರೂಪಾಯಿ ಎಂದಿದ್ದರೂ, ವಾಸ್ತವದಲ್ಲಿ ಕಾರ್ಮಿಕರಿಗೆ ಸಿಗುತ್ತಿರುವುದು ಕೇವಲ 13 ರಿಂದ 14 ಸಾವಿರ ರೂಪಾಯಿ ಮಾತ್ರ. 10-11 ಗಂಟೆಗಳ ಕಾಲ ಕಠಿಣ ಶ್ರಮ ಪಟ್ಟರೂ ಕಾರ್ಮಿಕರ ಬದುಕು ಹಸನಾಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ರಾಹುಲ್ ಮದುವೆ ವಿಷಯ ಪ್ರಸ್ತಾಪಿಸಿದ ಪ್ರಿಯಾಂಕಾ ಗಾಂಧಿ

ಇದೇ ಭೇಟಿಯ ವೇಳೆ ಒಂದು ಕುತೂಹಲಕಾರಿ ಪ್ರಸಂಗವೂ ನಡೆಯಿತು. ರಾಹುಲ್ ಮತ್ತು ಇರ್ಫಾನ್ ಸಂಭಾಷಣೆ ನಡೆಸುತ್ತಿದ್ದಾಗ ಸಂಸದೆ ಪ್ರಿಯಾಂಕಾ ಗಾಂಧಿ ಅವರು ಕರೆ ಮಾಡಿದ್ದರು. ಈ ವೇಳೆ ಇರ್ಫಾನ್ ಜೊತೆ ಮಾತನಾಡಿದ ಪ್ರಿಯಾಂಕಾ, ದಯವಿಟ್ಟು ರಾಹುಲ್ ಗಾಂಧಿಗೆ ಮದುವೆಯಾಗಲು ಹೇಳಿ, ಅವರು ನನ್ನ ಮಾತು ಕೇಳುತ್ತಿಲ್ಲ ಎಂದು ಮನವಿ ಮಾಡಿದರು. ಇದಕ್ಕೆ ಚಟಾಕಿ ಹಾರಿಸಿದ ಇರ್ಫಾನ್, ರಾಹುಲ್ ಗಾಂಧಿ ಅವರು ಮದುವೆಯಾಗದಿರುವುದೇ ಒಳಿತು. ಅವರು ಅತ್ಯಂತ ಸರಳ ಮತ್ತು ಒಳ್ಳೆಯ ಹೃದಯವುಳ್ಳ ವ್ಯಕ್ತಿ ಎಂದು ಹಾಸ್ಯ ಚಟಾಕಿ ಹಾರಿಸಿ ಅಲ್ಲಿ ನೆರೆದಿದ್ದವರನ್ನು ನಗಿಸಿದರು.

ಯಾವುದೇ ಔಪಚಾರಿಕ ಶಿಕ್ಷಣ ಪಡೆಯದಿದ್ದರೂ ಯೂಟ್ಯೂಬ್ ಮತ್ತು ಗೂಗಲ್ ಮೂಲಕ ಜ್ಞಾನ ಸಂಪಾದಿಸಿರುವ ಇರ್ಫಾನ್, ಸಂವಿಧಾನದ ಪೀಠಿಕೆಯನ್ನು ಉಲ್ಲೇಖಿಸಿ ಮಾತನಾಡುವ ಮೂಲಕ ಎಲ್ಲರನ್ನೂ ಬೆರಗುಗೊಳಿಸಿದ್ದಾರೆ. ಪ್ರಧಾನಿ ಮೋದಿ ಅವರಿಗಿಂತ ಮೊದಲು ತಮಗೆ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡುವ ಇಚ್ಛೆಯಿದೆ ಎಂದು ಅವರು ಹೇಳಿದ್ದಾರೆ. ತಮ್ಮ ಕೊಳಚೆ ಪ್ರದೇಶಗಳಲ್ಲಿ 12 ವರ್ಷದ ಪುಟ್ಟ ಮಕ್ಕಳಿಗೂ ಗಾಂಜಾ ಮತ್ತು ಮಾದಕ ದ್ರವ್ಯಗಳು ಎಲ್ಲಿ ಸಿಗುತ್ತವೆ ಎಂಬುದು ಗೊತ್ತಿದೆ. ಹೀಗಿದ್ದರೂ ಪೊಲೀಸರು ಯಾಕೆ ಮೌನವಾಗಿದ್ದಾರೆ ಎಂಬ ಕಠಿಣ ಪ್ರಶ್ನೆಯನ್ನು ಅಮಿತ್ ಶಾ ಅವರ ಮುಂದಿಡಲು ನಾನು ಕಾಯುತ್ತಿದ್ದೇನೆ ಎಂದು ಇರ್ಫಾನ್ ಹೇಳಿದ್ದಾರೆ. ಇರ್ಫಾನ್ ಅವರ ಈ ದಿಟ್ಟ ನಡೆ ಮತ್ತು ಸಾಮಾಜಿಕ ಕಳಕಳಿಯನ್ನು ಕಂಡು ರಾಹುಲ್ ಗಾಂಧಿ ಅವರು ಕೂಡ ಸಾಮಾಜಿಕ ಜಾಲತಾಣದಲ್ಲಿ ಶ್ಲಾಘಿಸಿದ್ದಾರೆ. ಇಂತಹ ಯುವಕರೇ ದೇಶದ ನಿಜವಾದ ಆಸ್ತಿ ಎಂದು ಬಣ್ಣಿಸಿದ್ದಾರೆ.

ShareTweetSendShare
Join us on:

Related Posts

ಮುಖ್ಯಮಂತ್ರಿ ಸೂಚನೆಗೆ ಖಾಸಗಿ ಶಾಲೆಗಳ ಆಕ್ಷೇಪ; ಶಿಕ್ಷಣ ವಲಯದಲ್ಲಿ ಚರ್ಚೆ

ಮುಖ್ಯಮಂತ್ರಿ ಸೂಚನೆಗೆ ಖಾಸಗಿ ಶಾಲೆಗಳ ಆಕ್ಷೇಪ; ಶಿಕ್ಷಣ ವಲಯದಲ್ಲಿ ಚರ್ಚೆ

by Shwetha
July 29, 2026
0

ರಾಜ್ಯದ ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸುವ ಉದ್ದೇಶದಿಂದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಹತ್ವದ ಪ್ರಸ್ತಾಪವೊಂದನ್ನು ಮುಂದಿಟ್ಟಿದ್ದಾರೆ. ಅದರಂತೆ, ನಗರ ಪ್ರದೇಶದಲ್ಲಿ ವಾರ್ಷಿಕ ₹50,000ಕ್ಕಿಂತ ಹೆಚ್ಚು ಶುಲ್ಕ...

ಕನ್ನಡಿಗರ ತೆರಿಗೆ ಹಣದಲ್ಲಿ ಪೆರಿಯಾರ್ ಹೆಸರೇ? ಕನ್ನಡಪರ ಸಂಘಟನೆಗಳ ಉಗ್ರ ಹೋರಾಟಕ್ಕೆ ಮಣಿದ ಜಿಬಿಎ: ಭವನದ ಹೆಸರು ಇಂದಿರಾ ಗಾಂಧಿ ಕನ್ವೆನ್ಷನ್ ಹಾಲ್ ಎಂದು ಮರುನಾಮಕರಣ

ಕನ್ನಡಿಗರ ತೆರಿಗೆ ಹಣದಲ್ಲಿ ಪೆರಿಯಾರ್ ಹೆಸರೇ? ಕನ್ನಡಪರ ಸಂಘಟನೆಗಳ ಉಗ್ರ ಹೋರಾಟಕ್ಕೆ ಮಣಿದ ಜಿಬಿಎ: ಭವನದ ಹೆಸರು ಇಂದಿರಾ ಗಾಂಧಿ ಕನ್ವೆನ್ಷನ್ ಹಾಲ್ ಎಂದು ಮರುನಾಮಕರಣ

by Shwetha
July 29, 2026
0

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಕನ್ನಡಿಗರ ತೆರಿಗೆ ಹಣದಲ್ಲಿ ನಿರ್ಮಿಸಲಾದ ಸಮುದಾಯ ಭವನವೊಂದಕ್ಕೆ ತಮಿಳುನಾಡಿನ ನಾಯಕ ಪೆರಿಯಾರ್ ಹೆಸರಿಟ್ಟಿದ್ದ ಜಿಬಿಎ ಕ್ರಮಕ್ಕೆ ಕನ್ನಡಪರ ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದು,...

‘ರಿಸರ್ವೇಶನ್ ಹಠಾವೋ ಆಂದೋಲನ’ಕ್ಕೆ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಚರ್ಚೆ

‘ರಿಸರ್ವೇಶನ್ ಹಠಾವೋ ಆಂದೋಲನ’ಕ್ಕೆ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಚರ್ಚೆ

by Shwetha
July 29, 2026
0

ನೀಟ್ ಪರೀಕ್ಷೆ ವಿವಾದದ ಹಿನ್ನೆಲೆ ನಡೆದ ಪ್ರತಿಭಟನೆಗಳ ಬಳಿಕ, ಸಾಮಾಜಿಕ ಜಾಲತಾಣಗಳಲ್ಲಿ 'ರಿಸರ್ವೇಶನ್ ಹಠಾವೋ ಆಂದೋಲನ' ಎಂಬ ಅಭಿಯಾನ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. ಮಾಹಿತಿಯ ಪ್ರಕಾರ, 'ರಿಸರ್ವೇಶನ್...

ಅಧರ್ಮಿಯನ್ನೇ ವಿಷ್ಣುವಿನ ಅವತಾರ ಎಂದರೇ ಉದ್ಧವ್ ಠಾಕ್ರೆ? ನೀಟ್ ಹೋರಾಟಗಾರನಿಗೆ ದೈವತ್ವ ನೀಡಿದ ಹೇಳಿಕೆಗೆ ದೇಶಾದ್ಯಂತ ಜನಾಕ್ರೋಶ ಸ್ಫೋಟ

ಅಧರ್ಮಿಯನ್ನೇ ವಿಷ್ಣುವಿನ ಅವತಾರ ಎಂದರೇ ಉದ್ಧವ್ ಠಾಕ್ರೆ? ನೀಟ್ ಹೋರಾಟಗಾರನಿಗೆ ದೈವತ್ವ ನೀಡಿದ ಹೇಳಿಕೆಗೆ ದೇಶಾದ್ಯಂತ ಜನಾಕ್ರೋಶ ಸ್ಫೋಟ

by Shwetha
July 29, 2026
0

ಮುಂಬೈ: ದೇಶದ ಶೈಕ್ಷಣಿಕ ವಲಯದಲ್ಲಿ ಸಂಚಲನ ಮೂಡಿಸಿರುವ ನೀಟ್ ಪರೀಕ್ಷಾ ಅಕ್ರಮ ಹಾಗೂ ಹೆಚ್ಚುತ್ತಿರುವ ನಿರುದ್ಯೋಗದ ವಿರುದ್ಧ ಯುವ ಸಮೂಹವನ್ನು ಒಗ್ಗೂಡಿಸಿ ಬೃಹತ್ ಪ್ರತಿಭಟನೆ ನಡೆಸಿದ್ದ ಸಿಜೆಪಿ...

ದಿನ ಭವಿಷ್ಯ (26-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (29-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
July 29, 2026
0

ದಿನ ಭವಿಷ್ಯ: 29-07-2026 ಮೇಷ ರಾಶಿ: ಇಂದಿನ ದಿನ ನಿಮಗೆ ಮಿಶ್ರ ಫಲಿತಾಂಶಗಳನ್ನು ತರಲಿದೆ. ವೃತ್ತಿ ಕ್ಷೇತ್ರದಲ್ಲಿ ನಿಮ್ಮ ಕಾರ್ಯವೈಖರಿಗೆ ಮೇಲಧಿಕಾರಿಗಳಿಂದ ಮೆಚ್ಚುಗೆ ವ್ಯಕ್ತವಾಗುತ್ತದೆ. ವ್ಯಾಪಾರಸ್ಥರಿಗೆ ನಿರೀಕ್ಷೆಗೂ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram