Bagalkot | ಕ್ರೂಸರ್ ಪಲ್ಟಿ, ಐದು ಮಂದಿಗೆ ಗಾಯ
ಬಾಗಲಕೋಟೆ : ಕ್ರೂಸರ್ ಪಲ್ಟಿಯಾಗಿ ಐದಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿರುವ ಘಟನೆ ಬಾಗಲಕೋಟೆ ಜಿಲ್ಲೆಯು ಬೀಳಗಿ ತಾಲೂಕಿನ ಶಿರಗುಪ್ಪಿ ಕ್ರಾಸ್ ಬಳಿ ನಡೆದಿದೆ.
ಘಟನೆಯಲ್ಲಿ ಗಣೇಶ್ ಅರಕೇರಿ, ಯಲ್ಲಪ್ಪ ಭೂಷನ್ನವರ ಎಂಬುವರಿಗೆ ಗಂಭೀರ ಗಾಯಗಳಾಗಿವೆ.
ಸದ್ಯ ಗಾಯಾಳುಗಳನ್ನು ಬಾಗಲಕೋಟೆಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಬೀಳಗಿ ತಾಲೂಕಿನ ಕುಂದರಗಿ ಗ್ರಾಮದಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ ಮಾಡಲಾಗಿತ್ತು.
ಈ ಕ್ರೀಡಾಕೂಟದಲ್ಲಿ ಭಾಗವಹಿಸಿ ವಾಪಸ್ ಆಗುತ್ತಿದ್ದ ವೇಳೆಯಲ್ಲಿ ಕ್ರೂಸರ್ ಪಲ್ಟಿಯಾಗಿದೆ.
ಕ್ರೂಸರ್ ನಲ್ಲಿ 12 ಕ್ಕೂ ಹೆಚ್ಚು ಮಂದಿ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ.