ಬಾಗೇಪಲ್ಲಿ ಕ್ಷೇತ್ರದ ಮಾಜಿ ಶಾಸಕ ನಿಧನ
ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದ ಬಾಗೇಪಲ್ಲಿ ಕ್ಷೇತ್ರದ ಮಾಜಿ ಶಾಸಕ ಜಿ.ವಿ ಶ್ರೀರಾಮರೆಡ್ಡಿ ಇಂದು ನಿಧನರಾಗಿದ್ದಾರೆ.
ಸರಕಾರಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಕೊನೆ ಉಸಿರೆಳದಿದ್ದಾರೆ. ಇವರು ಸಿಪಿಐಎಂ ಪಕ್ಷದಿಂದ ಶಾಸಕರಾಗಿದ್ದರು. ಸಿಪಿಐಎಂ ಪಕ್ಷದಿಂದ ಉಚ್ಛಾಟಿತರಾದ ನಂತರ ಪ್ರಜಾ ಸಂಘರ್ಷ ಸಮಿತಿ ಪಕ್ಷ ಸ್ಥಾಪನೆ ಮಾಡಿದ್ದರು.
ಸದ್ಯ ಶ್ರೀರಾಮರೆಡ್ಡಿ ನಿಧನಕ್ಕೆ ಅಪಾರ ಪ್ರಮಾಣದ ಬೆಂಬಲಿಗರ ಸಂತಾಪ ಸೂಚಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಸಚಿವ ಸುಧಾಕರ್, ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಶ್ರೀ ಜಿ.ವಿ.ಶ್ರೀರಾಮರೆಡ್ಡಿ ಅವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸುತ್ತೇನೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಶ್ರೀ ಜಿ.ವಿ.ಶ್ರೀರಾಮರೆಡ್ಡಿ ಅವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸುತ್ತೇನೆ.
ಭಗವಂತ ಶ್ರೀಯುತರ ಆತ್ಮಕ್ಕೆ ಚಿರಶಾಂತಿ ಕರುಣಿಸಲಿ, ಅವರ ಕುಟುಂಬ ಸದಸ್ಯರು ಹಾಗೂ ಬಂಧು-ಬಳಗಕ್ಕೆ ಈ ಅಗಲಿಕೆಯನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ. pic.twitter.com/BGMeS57GCa
— Dr Sudhakar K (@mla_sudhakar) April 15, 2022
ಭಗವಂತ ಶ್ರೀಯುತರ ಆತ್ಮಕ್ಕೆ ಚಿರಶಾಂತಿ ಕರುಣಿಸಲಿ, ಅವರ ಕುಟುಂಬ ಸದಸ್ಯರು ಹಾಗೂ ಬಂಧು-ಬಳಗಕ್ಕೆ ಈ ಅಗಲಿಕೆಯನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ ಎಂದು ಬರೆದುಕೊಂಡಿದ್ದಾರೆ.