ಬೆಂಗಳೂರು: ಡ್ರಗ್ಸ್ ಜಾಲದ ನಂಟಿನೊಂದಿಗೆ ಶಾಮೀಲಾದ ಆರೋಪದ ಮೇರೆಗೆ ಬಂಧನಕ್ಕೊಳಗಾಗಿರುವ ನಟಿ ರಾಗಿಣಿ ದ್ವಿವೇದಿ ಜಾಮೀನು ಅರ್ಜಿ ವಿಚಾರಣೆ ಕೆಲವೇ ಕ್ಷಣಗಳಲ್ಲಿ ನಡೆಯಲಿದೆ.
ಮಧ್ಯಾಹ್ನ 3 ಗಂಟೆಗೆ ಜಾಮೀನು ಅರ್ಜಿ ವಿಚಾರಣೆ ಆರಂಭವಾದರೆ, ಅದಕ್ಕೂ ಮೊದಲೇ ಮಧ್ಯಾಹ್ನ 1 ಗಂಟೆಗೆ ಸಿಸಿಬಿ ಪೊಲೀಸರು ನ್ಯಾಯಾಧೀಶರ ಮುಂದೆ ಹಾಜರುಪಡಿಸುವ ಸಾಧ್ಯತೆ ಇದೆ.
ನಟಿ ರಾಗಿಣಿ ದ್ವಿವೇದಿ ಅವರ ಸಿಸಿಬಿ ಕಸ್ಟಡಿ ಅಂತ್ಯವಾಗುತ್ತಿರುವ ಹಿನ್ನೆಲೆಯಲ್ಲಿ 1 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಎನ್‍ಡಿಎಂ ಕೋರ್ಟ್ ಮುಂದೆ ಪೊಲೀಸರು ಹಾಜರುಪಡಿಸುವ ಸಾಧ್ಯತೆ ಇದೆ. ರಾಗಿಣಿ ಜತೆಗೆ ಆಕೆ ಬಾಯ್ ಫ್ರೆಂಡ್ ರವಿಶಂಕರ್ ಸಿಸಿಬಿ ಕಸ್ಟಡಿ ಕೊನೆಗೊಳ್ಳಲಿದ್ದು, ಆತನನ್ನು ಕೂಡನ್ಯಾಯಾಧೀಶರ ಮುಂದೆ ಹಾಜರುಪಡಿಸುವ ಸಾಧ್ಯತೆ ಇದೆ.
ಈ ನಡುವೆ, ರಾಗಿಣಿ ವಿಚಾರಣೆಗೆ ಸಹಕಾರ ನೀಡುತ್ತಿಲ್ಲ, ಹೀಗಾಗಿ ಇನ್ನಷ್ಟು ದಿನ ವಿಚಾರಣೆ ನಡೆಸುವ ಅಗತ್ಯವಿದೆ. ಹೀಗಾಗಿ ಇನ್ನಷ್ಟು ದಿನ ವಶಕ್ಕೆ ನೀಡುವಂತೆ ಸಿಸಿಬಿ ಪೊಲೀಸರು ನ್ಯಾಯಾಧೀಶರ ಮುಂದೆ ಪ್ರಸ್ತಾವನೆ ಸಲ್ಲಿಸುವ ಸಾಧ್ಯತೆ ಇದೆ.
ಇದೇ ವೇಳೆ, ರಾಗಿಣಿ ವಿರುದ್ಧ ಸಿಸಿಬಿ ಪೊಲೀಸರು ದಾಖಲಿಸಿರುವ ಪ್ರಕರಣಗಳು ನಿರಾಧಾರ. ಅವರು ಯಾವುದೇ ತಪ್ಪು ಮಾಡಿಲ್ಲ. ಹೀಗಾಗಿ ಅವರಿಗೆ ಜಾಮೀನು ನೀಡಬೇಕು ಎಂದು ರಾಗಿಣಿ ಪರ ವಕೀಲರು ನ್ಯಾಯಾಧೀಶರಲ್ಲಿ ಮನವಿ ಮಾಡುವ ಸಾಧ್ಯತೆ ಇದೆ. ಎರಡು ಕಡೆಗಳ ವಾದ ಆಲಿಸಿದ ನ್ಯಾಯಧೀಶರು ಜಾಮೀನು ನೀಡುತ್ತಾರಾ, ಮತ್ತೆ ಸಿಸಿಬಿ ಕಸ್ಟಡಿಗೆ ನೀಡುತ್ತಾರಾ ಅಥವಾ ನ್ಯಾಯಾಂಗ ಬಂಧನಕ್ಕೆ ನೀಡಿ ಜೈಲಿಗೆ ಕಳಿಸುತ್ತಾರಾ ಎಂಬುದು ಕುತೂಹಲ ಮೂಡಿಸಿದೆ.
ಚಿನ್ನದ ಮೇಲೆ ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ? ಹಾಗಾದರೆ ನಿರ್ಧಾರ ತೆಗೆದುಕೊಳ್ಳುವ ಮುನ್ನ ಈ ಮಾಹಿತಿ ಓದಿ
ಭಾರತೀಯರ ಪಾಲಿಗೆ ಚಿನ್ನ ಕೇವಲ ಆಭರಣವಲ್ಲ, ಅದೊಂದು ಭಾವನೆ, ಪರಂಪರೆ ಮತ್ತು ಆಪತ್ಕಾಲದಲ್ಲಿ ಕೈಹಿಡಿಯುವ ಅತಿ ದೊಡ್ಡ ಆಸ್ತಿ. ಮನೆಯಲ್ಲಿ ಒಂದು ಶುಭ ಕಾರ್ಯ ನಡೆಯಲಿ ಅಥವಾ...








