ಮಗುವನ್ನು ದತ್ತು ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಹಾಗೂ ಮಾಜಿ ಬಿಗ್ ಬಾಸ್ ಸ್ಪರ್ಧಿ ಸೋನು ಶ್ರೀನಿವಾಸ್ ಗೌಡಗೆ ಜಾಮೀನು ಮಂಜೂರಾಗಿದೆ.
ಇಬ್ಬರು ಶ್ಯೂರಿಟಿ ಹಾಗೂ ಒಂದು ಲಕ್ಷ ರೂಪಾಯಿ ಬಾಂಡ್ ನೀಡಲು ಸೂಚಿಸಿ, ಷರತ್ತು ಬದ್ಧ ಜಾಮೀನು ನೀಡಲಾಗಿದೆ. ಸೋನು ಶ್ರೀನಿವಾಸ್ ಗೌಡ ಪರವಾಗಿ ವಕೀಲ ಪ್ರಕಾಶ್ ಜಾಮೀನು ಅರ್ಜಿ ಸಲ್ಲಿಸಿದ್ದರು. ಅಕ್ರಮವಾಗಿ ಮಗುವನ್ನು ಮನೆಯಲ್ಲಿಟ್ಟುಕೊಂಡಿರುವ ಆರೋಪದ ಮೇಲೆ ಬಂಧನವಾಗಿದ್ದ ಸೋನು ಶ್ರೀನಿವಾಸ್ ಗೌಡ ಪೊಲೀಸ್ ಠಾಣೆಯಲ್ಲಿ ಕಣ್ಣೀರು ಸುರಿಸಿದ್ದರು. ನನ್ನಿಂದ ಯಾವುದೇ ತಪ್ಪು ಆಗಿಲ್ಲವೆಂದು ಹೇಳಿಕೊಂಡಿದ್ದರು.
ಮಗುವನ್ನು ಕರೆದುಕೊಂಡು ಬರುವುದು ತಪ್ಪು ಎಂಬುವುದು ನನಗೆ ಗೊತ್ತಿರಲಿಲ್ಲ. ಗೊತ್ತಿದ್ದರೆ ಪ್ರೊಸಿಜರ್ ಮೂಲಕವೇ ದತ್ತು ಮಾಡಿಸಿಕೊಳ್ಳುತ್ತಿದ್ದೆ. ನಾನು ತಪ್ಪು ಮಾಡಿಲ್ಲ ಎಂದು ಗೋಳಾಡಿದ್ದರು.