ಧರ್ಮಸ್ಥಳ ಕ್ಷೇತ್ರದ ವಿರುದ್ಧ ಅಪಪ್ರಚಾರ ನಡೆಸಿದ ಆರೋಪದಲ್ಲಿ ಬಂಧಿತನಾಗಿ ಜೈಲು ಸೇರಿದ್ದ ಮಾಸ್ಕ್ ಮ್ಯಾನ್ ಚಿನ್ನಯ್ಯನ ಪರಿಸ್ಥಿತಿ ಇನ್ನೂ ಬದಲಾಗಿಲ್ಲ. ಬೆಳ್ತಂಗಡಿ JMFC ನ್ಯಾಯಾಲಯ ಚಿನ್ನಯ್ಯನಿಗೆ ಜಾಮೀನು ಮಂಜೂರು ಮಾಡಿದರೂ, ಅವನು ಇನ್ನೂ ಜೈಲಿನಿಂದ ಹೊರಗೆ ಬರಲು ಸಾಧ್ಯವಾಗಿಲ್ಲ.
ಮೂಲಗಳ ಪ್ರಕಾರ, ಜಾಮೀನಿನೊಂದಿಗೆ ನ್ಯಾಯಾಲಯ ಒಟ್ಟು 12 ಕಟ್ಟುನಿಟ್ಟಿನ ನಿಬಂಧನೆಗಳನ್ನು ವಿಧಿಸಿದೆ. ವೈಯಕ್ತಿಕ ಬಾಂಡ್ ಸೇರಿ ಈ ನಿಬಂಧನೆಗಳನ್ನು ಸಂಪೂರ್ಣವಾಗಿ ಪೂರೈಸುವವರೆಗೂ ಬಿಡುಗಡೆ ಸಾಧ್ಯವಿಲ್ಲ ಎಂಬುದು ಕಾನೂನು ಪ್ರಕ್ರಿಯೆ. ಈ ನಿಬಂಧನೆಗಳನ್ನು ಪೂರೈಸುವಲ್ಲಿ ವಿಳಂಬವಾಗಿರುವುದರಿಂದ, ಚಿನ್ನಯ್ಯ ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ವಿಚಾರಣಾಧೀನ ಖೈದಿಯಾಗಿ ಮುಂದುವರಿದಿದ್ದಾನೆ.
ಜಾಮೀನು ಸಿಕ್ಕಿದ್ದರೂ ಬಿಡುಗಡೆಯಾಗದಿರುವುದು ಸಾರ್ವಜನಿಕರಲ್ಲಿ ಕುತೂಹಲ ಮೂಡಿಸಿದೆ. ಪ್ರಕರಣದ ಮುಂದಿನ ಬೆಳವಣಿಗೆಗಳ ಮೇಲೆ ಎಲ್ಲರೂ ಕಣ್ಣಿಟ್ಟಿದ್ದಾರೆ.








