ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ದರ್ಶನ್‌ಗೆ (Darshan) ಜಾಮೀನು ಸಿಕ್ಕಿದ್ದು, ಪತ್ನಿ ಮಹಾಲಕ್ಷ್ಮೀ ಸಂತಸ ವ್ಯಕ್ತಪಡಿಸಿದ್ದಾರೆ.
ದರ್ಶನ್ ಗೆ ಬರೋಬ್ಬರಿ 5 ತಿಂಗಳ ನಂತರ ಜಾಮೀನು ಸಿಕ್ಕಿದೆ. ದರ್ಶನ್ ಗೆ ಹೈಕೋರ್ಟ್ 6 ವಾರಗಳ ಕಾಲ ಮಧ್ಯಂತರ ಜಾಮೀನು (Bail) ಮಂಜೂರು ಮಾಡಿದ ಹಿನ್ನೆಲೆಯಲ್ಲಿ ಪತ್ನಿ ಕಾಮಾಕ್ಯ ದೇವಿಗೆ ಪತ್ನಿ ವಿಜಯಲಕ್ಷ್ಮಿ ಧನ್ಯವಾದ ಅರ್ಪಿಸಿದ್ದಾರೆ.
ಪತಿಗೆ ಜಾಮೀನು ಸಿಗುತ್ತಿದ್ದಂತೆ ಕಾಮಾಕ್ಯ ದೇವಸ್ಥಾನದ ಫೋಟೋ ಶೇರ್ ಮಾಡಿ ಥ್ಯಾಂಕ್ ಫುಲ್, ಗ್ರೇಟ್ ಫುಲ್, ಬ್ಲೆಸ್ಡ್ ಎಂದು ವಿಜಯಲಕ್ಷ್ಮಿ ಸಂತಸ ವ್ಯಕ್ತಪಡಿಸಿದ್ದಾರೆ. ದರ್ಶನ್ ಆದಷ್ಟು ಬೇಗ ಬಿಡುಗಡೆ ಆಗಲಿ ಎಂದು ಇತ್ತೀಚೆಗೆ ಕಾಮಾಕ್ಯ ದೇವಸ್ಥಾನಕ್ಕೆ ವಿಜಯಲಕ್ಷ್ಮಿ ಭೇಟಿ ನೀಡಿ ಪೂಜೆ ಸಲ್ಲಿಸಿದ್ದರು.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿ ದರ್ಶನ್‌ರನ್ನು ಜೂನ್ 11ರಂದು ಬಂಧಿಸಲಾಗಿತ್ತು. ಬಳ್ಳಾರಿ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.








