Umesh Katthi | ಉಮೇಶ್ ಕತ್ತಿ ನಿಧನಕ್ಕೆ ಬೈರತಿ ಬಸವರಾಜ ಸಂತಾಪ
ಬೆಳಗಾವಿ : ಆಹಾರ ಮತ್ತು ನಾಗರಿಕ ಪೂರೈಕೆ ಹಾಗೂ ಅರಣ್ಯ ಸಚಿವರಾಗಿದ್ದ ಉಮೇಶ್. ವಿ.ಕತ್ತಿ ಅವರ ಹಠಾತ್ ನಿಧನದಿಂದ ಮನಸ್ಸಿಗೆ ತುಂಬಾ ಆಘಾತವಾಗಿದೆ ಎಂದು ಸಚಿವ ಬೈರತಿ ಬಸವರಾಜ ಹೇಳಿದ್ದಾರೆ.
ಬೆಳಗಾವಿ ಜಿಲ್ಲೆಯ ಹುಕ್ಕೇರಿ ವಿಧಾನ ಸಭಾ ಕ್ಷೇತ್ರದ ಶಾಸಕರಾಗಿದ್ದ ಅವರು ಆದೇ ಜಿಲ್ಲೆಯಿಂದ 8 ಬಾರಿ ಗೆದ್ದು ದಾಖಲೆ ನಿರ್ಮಿಸಿದ್ದರು.

ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳಿಗೆ ಧ್ವನಿಯಾಗಿದ್ದ ಅವರ ಅಗಲಿಕೆ ತುಂಬಲಾರದ ನಷ್ಟವಾಗಿದೆ.
ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ಅವರ ಕುಟುಂಬದ ಸದಸ್ಯರಿಗೆ, ಆಪಾರ ಬಂಧು, ಬಳಗ, ಅಭಿಮಾನಿಗಳಿಗೆ ದೇವರು ನೀಡಲಿ ಎಂದು ಪ್ರಾರ್ಥಿಸಿದ್ದಾರೆ.