ಅಯೋಧ್ಯೆ : ಶ್ರೀರಾಮ ಮಂದಿರದ (Ram Mandir) ಗರ್ಭಗುಡಿಯ ಪೀಠದ ಮೇಲೆ ಬಾಲರಾಮನ (ರಾಮಲಲ್ಲಾ) ವಿಗ್ರಹವನ್ನು (Ramlalla Idol) ಇರಿಸಲಾಗಿದ್ದು, ಫೋಟೋ ವೈರಲ್ ಆಗಿದೆ.
ಶ್ರೀರಾಮಜನ್ಮಭೂಮಿ ತೀರ್ಥ ಕ್ಷೇತ್ರದ ಟ್ರಸ್ಟಿ ಬಿಮಲೇಂದ್ರ ಮೋಹನ್ ಪ್ರತಾಪ್ ಮಿಶ್ರಾ ವಿಗ್ರಹ ಆಯ್ಕೆ ಮಾಡಿದ್ದಾರೆ. ಗರ್ಭಗುಡಿಯ ಪೀಠದಲ್ಲಿ ಪ್ರತಿಷ್ಠಾಪಿಸಲಾಗಿರುವ ಬಾಲರಾಮನ ಮೂರ್ತಿ ಚಿತ್ರ ವೈರಲ್ ಆಗಿದ್ದು, ಜನರು ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ.
ಈ ವಿಗ್ರಹವನ್ನು ಈಗಾಗಲೇ ಭಾರೀ ಮೆರವಣಿಗೆ ಮೂಲಕ ದೇವಸ್ಥಾನಕ್ಕೆ ತರಲಾಗಿದೆ. ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಕೃಷ್ಣಶಿಲೆಯಿಂದ ಈ ಮೂರ್ತಿಯನ್ನು ಕೆತ್ತನೆ ಮಾಡಿದ್ದಾರೆ. ಕೃಷ್ಣಶಿಲೆಯಲ್ಲಿ ಮೂಡಿದ 5 ವರ್ಷದ ರಾಮನ 51 ಇಂಚು ಎತ್ತರದ ಬಾಲರಾಮನ ಮೂರ್ತಿಯನ್ನು ಪ್ರತಿಷ್ಠಾಪಿಸಲಾಯಿತು.