ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಗೆ ಜಾಮೀನು ಸಿಕ್ಕಿದ್ದು, ಈಗ ಆಸ್ಪತ್ರೆಯಿಂದಲೂ ದರ್ಶನ್ ಮನೆಗೆ ಬಂದಿದ್ದಾರೆ. ಈ ವೇಳೆ ಪತ್ನಿ ವಿಜಯಲಕ್ಷ್ಮೀ ತಾಯಿ ಚಾಮುಂಡೇಶ್ವರಿಯ ದರ್ಶನ ಮಾಡಿದ್ದಾರೆ,.
ಇಂದು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ, ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ದರ್ಶನ್ ಹೊರತುಪಡಿಸಿ ಕುಟುಂಬ ಸಮೇತವಾಗಿ ತೆರಳಿದ್ದಾರೆ. ದಿನಕರ್, ಮೀನಾ ತೂಗುದೀಪ, ವಿಜಯಲಕ್ಷ್ಮಿ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ನಟ ದರ್ಶನ್ ಮಾತ್ರ ಮೈಸೂರಿನ ತೋಟದ ಮನೆಯಲ್ಲೇ ವಿಶ್ರಾಂತಿ ಪಡೆಯುತ್ತಿದ್ದಾರೆ. ದರ್ಶನ್ ಬಿಡುಗಡೆಯಾಗಿದ್ದಕ್ಕೆ ಅಭಿಮಾನಿಗಳು ಸಂತಸ ವ್ಯಕ್ತಪಡಿಸುತ್ತಿದ್ದಾರೆ.