ವಿಧಾನಸಭೆಯಿಂದ ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಮುಸ್ಲಿಂ ಕೋಟಾದಲ್ಲಿ ಬಲ್ಕಿಸ್ ಬಾನು ಅವರನ್ನು ಆಯ್ಕೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಬಲ್ಕಿಸ್ ಬಾನು ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಧನ್ಯವಾದ ಅರ್ಪಿಸಿದ್ದಾರೆ.
ಮಹಿಳಾ ಮತ್ತು ಅಲ್ಪಸಂಖ್ಯಾತರ ಖೋಟಾದಡಿಯಲ್ಲಿ ಬಲ್ಕಿಸ್ ಬಾನು ಅವರಿಗೆ ಮಣೆ ಹಾಕಲಾಗಿದೆ. ಪಕ್ಷ ಅವಕಾಶ ಕೊಟ್ಟ ಬೆನ್ನಲ್ಲೇ, ಸಿಎಂ ಸಿದ್ಧರಾಮಯ್ಯರನ್ನು ಬಲ್ಕಿಸ್ ಬಾನು ಭೇಟಿ ಮಾಡಿದ್ದಾರೆ. ಸಿಎಂ ಸರ್ಕಾರಿ ನಿವಾಸಕ್ಕೆ ಭೇಟಿ ನೀಡಿ ಕೃತಜ್ಞತೆ ಸಲ್ಲಿಸಿದ್ದಾರೆ.
ಕಾಂಗ್ರೆಸ್ ನಿಂದ 8 ಜನರಿಗೆ ಟಿಕೆಟ್ ನೀಡಲಾಗಿದೆ. ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ಸೇರಿದಂತೆ 8 ಮಂದಿಗೆ ಕಾಂಗ್ರೆಸ್ ಟಿಕೆಟ್ ಘೋಷಣೆಯಾಗಿದೆ. ವಿಧಾನ ಪರಿಷತ್ ಚುನಾವಣೆಗೆ ಸೋಮವಾರ (ಜೂ.3) ಕೊನೆಯ ದಿನವಾಗಿದ್ದು, ಈ ಹಿನ್ನೆಯಲ್ಲಿ 8 ಅಭ್ಯರ್ಥಿಗಳ ಹೆಸರನ್ನು ಘೋಷಿಸಲಾಗಿದೆ.
ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ, ಎನ್.ಎಸ್ ಬೋಸರಾಜು, ವಂಸತ್ ಕುಮಾರ್, ಕೆ. ಗೋವಿಂದ ರಾಜ್, ಐವಾನ್ ಡಿಸೋಜ, ಜಗದೇವ್ ಗುತ್ತೇದಾರ್, ಬಿಲ್ಕಿಸ್ ಬಾನೊ, ಬಸನಗೌಡ ಬಾರ್ದಿಲಿ ಟಿಕೆಟ್ ಪಡೆದಿದ್ದಾರೆ. ಜಗದೀಶ್ ಶೆಟ್ಟರ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಬಸನಗೌಡ ಬಾರ್ದಿಲಿಗೆ ಟಿಕೆಟ್ ನೀಡಲಾಗಿದೆ.