ಬಳ್ಳಾರಿ ಜಿಲ್ಲೆಯಲ್ಲಿ 8 ತಿಂಗಳ ಅವಧಿಯಲ್ಲಿ 23 ಬಾಣಂತಿಯರ ಸಾವು! ಕ್ರಮ ಯಾವಾಗ..?
ಕರ್ನಾಟಕದಲ್ಲಿ ಸಂಭವಿಸಿರುವ ಬಾಣಂತಿಯರ ಸಾವು ರಾಜ್ಯ ಸರ್ಕಾರಕ್ಕೆ ತಲೆನೋವಾಗಿ ಪರಿಣಮಿಸಿದೆ. ಬಳ್ಳಾರಿ ಜಿಲ್ಲಾಧಿಕಾರಿಗಳು ಈಗ ಬಾಣಂತಿಯರ ಸಾವಿನ ವರದಿಯನ್ನು ಸರ್ಕಾರಕ್ಕೆ ನೀಡಿದ್ದು,ಇದರಿಂದಾಗಿ ಆಘಾತಕಾರಿ ಅಂಶ ಬಯಲಾಗಿದೆ. ಬಿಮ್ಸ್‌ನಲ್ಲಿ ಬಾಣಂತಿಯರ ಸಾವಿನ ಪ್ರಕರಣದ ತನಿಖೆ ಪ್ರಸ್ತುತ ನಡೆಯುತ್ತಿದೆ. ಈ ನಡುವೆ ಮತ್ತೊಂದು ಆಘಾತಕಾರಿ ಅಂಶ ಬಹಿರಂಗಗೊಂಡಿದೆ. ಬಳ್ಳಾರಿ ಜಿಲ್ಲೆಯಲ್ಲಿ 8 ತಿಂಗಳ ಅವಧಿಯಲ್ಲಿ 23 ಬಾಣಂತಿಯರು ಮೃತಪಟ್ಟಿದ್ದಾರೆ ಎಂದು ಜಿಲ್ಲಾಡಳಿತ ಸರ್ಕಾರಕ್ಕೆ ಸಲ್ಲಿಸಿದ ಅಡಿಟ್ ವರದಿಯಲ್ಲಿ ಉಲ್ಲೇಖವಾಗಿದೆ ಎಂದು ತಿಳಿದು ಬಂದಿದೆ.








