ಇಂದು ಈ ಜಿಲ್ಲೆ ಬಂದ್!?
ಉದಯಪುರ ಕನ್ಹಯ್ಯಾ ಹತ್ಯಗೆ ಖಂಡನೆ
ಹಿಂಧೂಪರ ಸಂಘಟನೆಗಳಿಂದ ಬಳ್ಳಾರಿ ಬಂದ್
ಬೆಳಗ್ಗೆ 8 ಗಂಟೆಯಿಂದ 4 ಗಂಟೆವರೆಗೆ ಬಂದ್
ಬಳ್ಳಾರಿ ಜಿಲ್ಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ಬಳ್ಳಾರಿ : ಉದಯಪುರ ಕನ್ಹಯ್ಯ ಹತ್ಯೆ ಖಂಡಿಸಿ ವಿವಿಧ ಹಿಂದೂ ಪರ ಸಂಘಟನೆಗಳು ಇಂದು ಬಳ್ಳಾರಿ ಬಂದ್ ಗೆ ಕರೆ ನೀಡಿವೆ.
ಇಂದು ಬೆಳಿಗ್ಗೆ 8 ಗಂಟೆಯಿಂದ ಬಂದ್ ಆರಂಭವಾಗಿದ್ದು, ಸಂಜೆ 4 ಗಂಟೆವರೆಗೆ ಬಂದ್ ಇರಲಿದೆ.

ಈ ಬಂದ್ ಗೆ ಥಿಯೇಟರ್ ಮಾಲೀಕರು, ವ್ಯಾಪಾರಸ್ಥರು, ಆಟೋ ಚಾಲಕರು ಬೆಂಬಲ ಸೂಚಿಸಿದ್ದಾರೆ.
ಬಂದ್ ಹಿನ್ನಲೆಯಲ್ಲಿ ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ಇತ್ತ ಹಿಂದೂ ಸಂಘಟನೆಗಳ ಕಾರ್ಯಕರ್ತರು ನಗರದ ರಾಯಲ್ ವೃತ್ತದಿಂದ ಬೃಹತ್ ಬೈಕ್ ರ್ಯಾಲಿ ನಡೆಸಿದರು.
ಬಿಜೆಪಿಯ ಮಾಜಿ ವಕ್ತಾರೆ ನೂಪರ್ ಶರ್ಮಾ ಅವರನ್ನು ಬೆಂಬಲಿಸಿ ಸೋಶಿಯಲ್ ಮೀಡಿಯಾದಲ್ಲಿ ಟೈಲರ್ ಕನ್ಹಯ್ಯ ಲಾಲ್ ಪೋಸ್ಟ್ ಹಾಕಿದ್ದರು.
ಈ ಹಿನ್ನಲೆಯಲ್ಲಿ ಇವರನ್ನ ಕತ್ತು ಸೀಳಿ ಭೀಕರವಾಗಿ ಹತ್ಯೆ ಮಾಡಲಾಗಿದೆ.