ಬೆಂಗಳೂರು: ತಿನ್ನುವ ಆಹಾರಕ್ಕೆ ಕೃತಕ ಬಣ್ಣ ಬಳಕೆ ಮಾಡುತ್ತಿರುವುದರಿಂದ ಆರೋಗ್ಯ ಹದಗೆಡುತ್ತಿದೆ. ಹೀಗಾಗಿ ಸರ್ಕಾರ ಕಟ್ಟು ನಿಟ್ಟಿನ ಕ್ರಮ ಕೈಗೊಂಡಿದೆ. ರಾಜ್ಯಾದ್ಯಂತ ಕಬಾಬ್(kabab), ಫಿಶ್(Fish), ಚಿಕನ್‌ಗೆ (chicken)ಕೃತಕ ಬಣ್ಣ (Artificial Colour) ಬಳಕೆ ಮಾಡುವುದನ್ನು ನಿರ್ಬಂಧಿಸಿ ರಾಜ್ಯ ಸರ್ಕಾರ (Karnataka Government) ಆದೇಶ ಹೊರಡಿಸಿದೆ.
ರಾಜ್ಯದ 36 ಕಡೆ ಕಬಾಬ್ ಮಾದರಿ ಸಂಗ್ರಹಿಸಿ ಲ್ಯಾಬ್ ಗೆ ಕಳುಹಿಸಲಾಗಿತ್ತು. ಅವುಗಳಲ್ಲಿ ಯಲ್ಲೋ ಹಾಗೂ ಕಾರ್ಮೋಸಿನ್ ಮಾದರಿ ಕಂಡು ಬಂದಿದೆ. ಇದರಿಂದ ಜನರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿರುವ ಹಿನ್ನೆಲೆಯಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಆಯುಕ್ತ ಈ ತೀರ್ಮಾನ ಕೈಗೊಂಡಿದೆ.
ರಾಜ್ಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯು ಈ ಹಿಂದೆ ಕಾಟನ್ ಕ್ಯಾಂಡಿ ಮತ್ತು ಗೋಬಿ ಮಂಚೂರಿ ಮಾದರಿಯನ್ನು ಸಂಗ್ರಹಿಸಿದ್ದು, ಇವುಗಳಲ್ಲಿ ಬಳಸುವ ಕೃತಕ ಬಣ್ಣಗಳಲ್ಲಿ ಹಾನಿಕಾರಕ ರಾಸಾಯನಿಕ ಇರುವುದು ಪತ್ತೆಯಾಗಿದೆ. ಕಾಟನ್ ಕ್ಯಾಂಡಿ ಮತ್ತು ಗೋಬಿ ಮಂಚೂರಿ ಮಾದರಿಯನ್ನ FSSAI ಸಂಗ್ರಹಿಸಿದ್ದು, ರಾಜ್ಯಾದ್ಯಂತ 170ಕ್ಕೂ ಹೆಚ್ಚು ಕಡೆ ಗೋಬಿ ಮಾದರಿ ಟೆಸ್ಟ್ ಮಾಡಲಾಗಿತ್ತು. ಟೆಸ್ಟಿಂಗ್ ವೇಳೆ ಕೃತಕ ಬಣ್ಣಗಳಲ್ಲಿ ಕ್ಯಾನ್ಸರ್ ಕಾರಕ ರಾಸಾಯನಿಕ ಇರುವುದು ಪತ್ತೆಯಾಗಿತ್ತು. ಹೀಗಾಗಿ ಕಲರ್ ಬಳಕೆ ನಿಷೇಧಿಸಲಾಗಿದೆ.
ಇದು ಕಾಟನ್ ಕ್ಯಾಂಡಿಯಲ್ಲಿ ಮಾತ್ರವಲ್ಲ, ಸಿಹಿ ತಿಂಡಿಗಳಾದ ಬಣ್ಣದ ಮಿಠಾಯಿಗಳಲ್ಲಿಯೂ ಕಂಡು ಬರುತ್ತದೆ. ಇದು ನಿರಂತರವಾಗಿ ದೇಹ ಸೇರಿದರೆ ಮೆದುಳಿಗೂ ಹಾನಿಯಾಗುತ್ತದೆ. ಈ ಹಿನ್ನೆಲೆಯಲ್ಲಿ ಕಲರ್ ಬಳಕೆ ನಿಷೇಧಿಸಲಾಗಿದೆ.