BAN v IND : ODI ನಲ್ಲಿ ರೋಹಿತ್ ಶರ್ಮಾ ಹೊಸ ದಾಖಲೆ
ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮ ಏಕದಿನ ಕ್ರಿಕೆಟ್ನಲ್ಲಿ ಭಾರತದ ಪರ ಅತ್ಯಧಿಕ ರನ್ಗಳಿಸಿದವರ ಪಟ್ಟಿಯಲ್ಲಿ ಭಾರತ ತಂಡದ ಮಾಜಿ ಆಟಗಾರ ಮೊಹಮ್ಮದ್ ಅಜ಼ರುದ್ದಿನ್ ಅವರನ್ನ ಹಿಂದಿಕ್ಕಿದ್ದಾರೆ.
ಆ ಮೂಲಕ ಅತ್ಯಧಿಕ ರನ್ಗಳಿಸಿದ ಭಾರತದ 6ನೇ ಬ್ಯಾಟ್ಸ್ಮನ್ ಎಂಬ ಹಿರಿಮೆ ತಮ್ಮದಾಗಿಸಿಕೊಂಡಿದ್ದಾರೆ.
ಭಾರತ ತಂಡದ ಬ್ಯಾಟಿಂಗ್ ಅಸ್ತ್ರವಾಗಿರುವ ಹಿಟ್ಮ್ಯಾನ್ ರೋಹಿತ್ ಶರ್ಮ, 234 ಏಕದಿನ ಪಂದ್ಯಗಳಲ್ಲಿ 9388 ರನ್ಗಳಿಸಿದ್ದಾರೆ. ಆ ಮೂಲಕ ಭಾರತ ತಂಡದ ಮಾಜಿ ಆಟಗಾರ ಅಜ಼ರುದ್ದಿನ್ ಅವರ 9378 ರನ್ಗಳನ್ನ ಹಿಂದಿಕ್ಕಿದರು.
ಬಾಂಗ್ಲಾದೇಶ ವಿರುದ್ಧ ಢಾಕಾದಲ್ಲಿ ಭಾನುವಾರ ನಡೆದ ಮೊದಲ ODI ಪಂದ್ಯದಲ್ಲಿ ಭಾರತದ ಪರ ಆರಂಭಿಕನಾಗಿ ಕಣಕ್ಕಿಳಿದ ಹಿಟ್ ಮ್ಯಾನ್ ರೋಹಿತ್ ಶರ್ಮ, 31 ಬಾಲ್ಗಳಲ್ಲಿ 27 ರನ್ಗಳಿಸಿ ತಮ್ಮ ವಿಕೆಟ್ ಕೈಚಲ್ಲಿದರು.
ಏಕದಿನ ಕ್ರಿಕೆಟ್ನಲ್ಲಿ ಅಧಿಕ ರನ್ಗಳಿಸಿದ ಭಾರತೀಯ ಬ್ಯಾಟ್ಸ್ಮನ್ಗಳ ಲಿಸ್ಟ್ನಲ್ಲಿ ಸಚಿನ್ ತೆಂಡುಲ್ಕರ್, ವಿರಾಟ್ ಕೊಹ್ಲಿ, ಸೌರವ್ ಗಂಗೂಲಿ, ರಾಹುಲ್ ದ್ರಾವಿಡ್ ಹಾಗೂ ಎಂ.ಎಸ್. ಧೋನಿ ಅವರುಗಳು ಟಾಪ್ 5 ಸ್ಥಾನದಲ್ಲಿದ್ದಾರೆ.
ಏಕದಿನ ಕ್ರಿಕೆಟ್ನಲ್ಲಿ ತಮ್ಮದೇ ಛಾಪು ಮೂಡಿಸಿರುವ ರೋಹಿತ್ ಶರ್ಮ, 2022ರಲ್ಲಿ ನಿರೀಕ್ಷಿತ ಆಟವಾಡಿಲ್ಲ. ಪ್ರಸಕ್ತ ವರ್ಷದಲ್ಲಿ 7 ಏಕದಿನ ಪಂದ್ಯಗಳನ್ನು ಆಡಿರುವ ಹಿಟ್ಮ್ಯಾನ್, 28.28ರ ಬ್ಯಾಟಿಂಗ್ ಸರಾಸರಿಯಲ್ಲಿ ಕೇವಲ 198 ರನ್ ಗಳಿಸಿದ್ದಾರೆ.
ಟೀಂ ಇಂಡಿಯಾದ ಅತ್ಯುತ್ತಮ ಆರಂಭಿಕ ಬ್ಯಾಟರ್ಗಳ ಸಾಲಿನಲ್ಲಿ ಗುರುತಿಸಿಕೊಂಡಿರುವ ರೋಹಿತ್ ಶರ್ಮ, ಪ್ರಸ್ತುತ ಬಾಂಗ್ಲಾದೇಶ ವಿರುದ್ಧ ನಡೆಯುತ್ತಿರುವ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ತಂಡವನ್ನ ಮುನ್ನಡೆಸುತ್ತಿದ್ದು, ಸರಣಿಯ ಮುಂದಿನ ಎರಡು ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡುವ ನಿರೀಕ್ಷೆ ಹೆಚ್ಚಾಗಿದೆ.