BAN vs IND : ಐಪಿಎಲ್ ಬದಲು ಅಂತಾರಾಷ್ಟ್ರೀಯ ಕ್ರಿಕೆಟ್ ಬಗ್ಗೆ ಯೋಚಿಸಿ – ದನೀಶ್
ಬಾಂಗ್ಲಾದೇಶ ವಿರುದ್ಧದ ಏಕದಿನ ಸರಣಿ ಸೋಲಿನ ಆಘಾತ ಕಂಡಿರುವ ಟೀಂ ಇಂಡಿಯಾ ಪ್ರದರ್ಶನದ ಬಗ್ಗೆ ಭಾರತದ ಮಾಜಿ ಕ್ರಿಕೆಟಿಗರಿಂದ ಸಾಕಷ್ಟು ಟೀಕೆಗಳು ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಪಾಕಿಸ್ತಾನದ ಮಾಜಿ ಕ್ರಿಕೆಟಿಗ ದನೀಶ್ ಕನೇರಿಯಾ ಸಹ ಭಾರತದ ಪ್ರದರ್ಶನದ ಬಗ್ಗೆ ಟೀಕೆ ವ್ಯಕ್ತಪಡಿಸಿದ್ದಾರೆ.
ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ 1 ವಿಕೆಟ್‌ಗಳ ಸೋಲು ಕಂಡಿದ್ದ ಭಾರತ 2ನೇ ಪಂದ್ಯದಲ್ಲಿ 5 ರನ್‌ಗಳಿಂದ ಸೋಲನುಭವಿಸಿತ್ತು. ಆ ಮೂಲಕ 3 ಪಂದ್ಯಗಳ ಸರಣಿಯಲ್ಲಿ 0-2ರ ಹಿನ್ನಡೆ ಅನುಭವಿಸಿದ ಭಾರತದ ಪ್ರದರ್ಶನದ ಬಗ್ಗೆ ಸಾಕಷ್ಟು ಟೀಕೆಗಳು ವ್ಯಕ್ತವಾಗಿತ್ತು.
ಹಲವು ಮಾಜಿ ಕ್ರಿಕೆಟಿಗರು ಸಹ ಭಾರತದ ಪ್ರದರ್ಶನದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು. ಈ ನಡುವೆ ಪಾಕಿಸ್ತಾನದ ಮಾಜಿ ಕ್ರಿಕೆಟಿಗ ದನೀಶ್ ಕನೇರಿಯಾ ಸಹ ಭಾರತೀಯ ಆಟಗಾರರ ಪ್ರದರ್ಶನವನ್ನ ಟೀಕಿಸಿದ್ದು, ʼಐಪಿಎಲ್ ಬದಲು ಅಂತಾರಾಷ್ಟ್ರೀಯ ಕ್ರಿಕೆಟ್ ಬಗ್ಗೆ ಹೆಚ್ಚು ಗಮನವಹಿಸಿʼ ಎಂದು ಟೀಕಿಸಿದ್ದಾರೆ.
“ಭಾರತದ ಆಟಗಾರರು ಐಪಿಎಲ್ ಬಗ್ಗೆ ಆಲೋಚಿಸುವುದನ್ನ ಬಿಟ್ಟು, ದೇಶದ ಬಗ್ಗೆ ಚಿಂತಸಬೇಕು. ಆಟಗಾರರಿಗೆ ಭಾರತೀಯ ಕ್ರಿಕೆಟ್ ಮುಖ್ಯವಾಗಬೇಕಿದ್ದು, ಫ್ರಾಂಚೈಸಿ ಕ್ರಿಕೆಟ್ ಅಲ್ಲ.
ಫ್ರಾಂಚೈಸಿ ಕ್ರಿಕೆಟ್‌ನಲ್ಲಿ ಹಣ ಸಿಗಬಹುದು, ಆದರೆ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲೂ ಸಹ ಹಣ ಸಂಪಾದಿಸಬಹುದು. ಅಂತಾರಾಷ್ಟ್ರೀಯ ಕ್ರಿಕೆಟ್ ಬಗ್ಗೆ ಯೋಚಿಸುವವರೆಗೂ ಇಂತಹ ಫಲಿತಾಂಶಗಳು ಮುಂದುವರಿಯುತ್ತಿರುತ್ತದೆ” ಎಂದು ಕನೇರಿಯಾ ಯೂಟ್ಯೂಬ್ ಚಾನೆಲ್‌ನಲ್ಲಿ ಹೇಳಿಕೆ ನೀಡಿದ್ದಾರೆ.