ಕ್ರಿಸ್ ಮಸ್ ಗೆ ಬಂತು “ಬನಾರಸ್” ಚಿತ್ರದ ಹೊಸ ಪೋಸ್ಟರ್
ಜಮೀರ್ ಅಹ್ಮದ್ ಖಾನ್ ಪುತ್ರ ಝೈದ್ ಖಾನ್ – ಸೋನಾಲ್ ಮಾಂಟೆರೊ ನಾಯಕ, ನಾಯಕಿಯಾಗಿ ನಟಿಸಿರುವ, ಜಯತೀರ್ಥ ನಿರ್ದೇಶಿಸಿರುವ ಪ್ಯಾನ್ ಇಂಡಿಯಾ ಸಿನಿಮಾ “ಬನಾರಸ್”.
ಚಿತ್ರದ ನೂತನ ಪೋಸ್ಟರ್ ಕ್ರಿಸ್ ಮಸ್ ಹಬ್ಬಕ್ಕೆ ಬಿಡುಗಡೆಯಾಗಿದೆ.
ಇತ್ತೀಚೆಗೆ ಬಿಡುಗಡೆಯಾಗಿರುವ ಫಸ್ಟ್ ಲುಕ್ ಹಾಗೂ ಮೋಷನ್ ಪೋಸ್ಟರ್ ಗೆ ಭಾರಿ ಪ್ರಶಂಸೆ ವ್ಯಕ್ತವಾಗಿದೆ. ಚಿತ್ರ ಜನವರಿಯಲ್ಲಿ ತೆರೆಗೆ ಬರಲಿದೆ.
ನ್ಯಾಷನಲ್ ಖಾನ್ಸ್ ಪ್ರೊಡಕ್ಷನ್ಸ್ ಮೂಲಕ ತಿಲಕ್ ರಾಜ್ ಬಲ್ಲಾಳ್ ಈ ಚಿತ್ರ ನಿರ್ಮಾಣ ಮಾಡಿದ್ದಾರೆ.
ಅದ್ವೈತ ಗುರುಮೂರ್ತಿ ಅವರ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ. ಕೆ.ಎಂ.ಪ್ರಕಾಶ್ ಸಂಕಲನ ಈ ಚಿತ್ರದ ಸಂಕಲನಕಾರರು.
ಐದು ಭಾಷೆಗಳಲ್ಲಿ ಅದ್ದೂರಿಯಾಗಿ “ಬನಾರಸ್” ನಿರ್ಮಾಣವಾಗಿದೆ.








