ಝೈದ್ ಖಾನ್ ಹುಟ್ಟುಹಬ್ಬಕ್ಕೆ “ಬನಾರಸ್” ಚಿತ್ರದ ನೂತನ ಪೋಸ್ಟರ್ ಬಿಡುಗಡೆ.
ತಿಲಕ್ ರಾಜ್ ಬಲ್ಲಾಳ್ ನಿರ್ಮಾಣದ, ಜಯತೀರ್ಥ ನಿರ್ದೇಶನದ, ಝೈದ್ ಖಾನ್(ಜಮೀರ್ ಅಹಮದ್ ಖಾನ್ ಪುತ್ರ), ಸೋನಾಲ್ ಮಂಟೆರೊ ಅಭಿನಯದ ಪ್ಯಾನ್ ಇಂಡಿಯಾ ಸಿನಿಮಾ “ಬನಾರಸ್”.
ಈ ಚಿತ್ರದ ನೂತನ ಪೋಸ್ಟರ್ ಬಿಡುಗಡೆಯಾಗಿದೆ. ನಾಯಕ ಝೈದ್ ಖಾನ್ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸುವ ಸಲುವಾಗಿ ಈ ಪೋಸ್ಟರ್ ಬಿಡುಗಡೆ ಮಾಡಲಾಗಿದೆ.
ಹಲವು ಭಾಷೆಗಳಲ್ಲಿ ನಿರ್ಮಾಣವಾಗಿರುವ ಈ ಚಿತ್ರದ ಪ್ರಚಾರ ಕಾರ್ಯ ಮಾರ್ಚ್ ನಲ್ಲಿ ಆರಂಭವಾಗಲಿದೆ. ಮೇ ವೇಳೆಗೆ ಚಿತ್ರ ತೆರೆಗೆ ಬರಲಿದೆ.