ಬೆAಗಳೂರು: ರಾಜಧಾನಿ ಬೆಂಗಳೂರು ನಗರದಲ್ಲಿ ಕೊರೊನಾ ಪ್ರಕರಣಗಳ ಶರವೇಗದಲ್ಲಿ ಹೆಚ್ಚಾಗುತ್ತಿದ್ದು, ಕೆಲವೇ ಹೊತ್ತಿನಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹಿರಿಯ ಅಧಿಕಾರಿಗಳ ಸಭೆ ನಡೆಸಲಿದ್ದಾರೆ.
ಲಾಕ್‌ಡೌನ್ ಸಡಿಲಿಕೆ ಬಳಿಕ ಬೆಂಗಳೂರು ನಗರಕ್ಕೆ ಬರುವವರು ಹಾಗೂ ಹೊರ ಹೋಗುವವರ ಸಂಖ್ಯೆ ಹೆಚ್ಚುತ್ತಿದೆ. ಪ್ರತಿ ದಿನ ೨೦, ೩೦ ಪ್ರಕರಣಗಳು ದಾಖಲಾಗುತ್ತಿದ್ದ ಬೆಂಗಳೂರಿನಲ್ಲಿ ಭಾನುವಾರ ಒಂದೇ ದಿನ ೧೯೬ ಹೊಸ ಪ್ರಕರಣಗಳು ದಾಖಲಾಗಿದ್ದು. ೬೪ ಮಂದಿ ಬಲಿಯಾಗಿದ್ದಾರೆ. ಹೀಗಾಗಿ ನಗರದಲ್ಲಿ ಪರಿಸ್ಥಿತಿ ಕೈಮೀರುತ್ತಿದ್ದು, ಬೆಂಗಳೂರು ನಗರದಲ್ಲಿ ಮತ್ತೆ ಲಾಕ್‌ಡೌನ್ ಮಾಡುತ್ತಾರಾ ಎಂಬ ಚರ್ಚೆ ಆರಂಭವಾಗಿದೆ.
ಕಳೆದ ೯ ದಿನಗಳಲ್ಲಿ ಬೆಂಗಳೂರಿನಲ್ಲಿ ಕಂಟೈನ್ಮೆAಟ್ ಝೋನ್‌ಗಳ ಸಂಖ್ಯೆ ೩೮೩ಕ್ಕೆ ಏರಿಕೆಯಾಗಿದೆ.
ಹೀಗಾಗಿ ಕೊರೊನಾ ಕೈ ಮೀರಿ ಹೋಗುತ್ತಿದ್ದು, ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಕೈಗೊಳ್ಳಬೇಕಾಗಿರುವ ಕ್ರಮಗಳ ಕುರಿತಾಗಿ ಚರ್ಚೆ ನಡೆಸಲಿದ್ದಾರೆ.
ಬೆಂಗಳೂರಿನಲ್ಲಿ ನಿನ್ನೆಯ ೧೯೬ ಕೊರೊನಾ ಪ್ರಕರಣಗಳು ಸೇರಿ ಬೆಂಗಳೂರಿನಲ್ಲಿ ೧೨೭೨ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ೪೧೧ ಮಂದಿ ಚಿಕಿತ್ಸೆ ಬಳಿಕ ಡಿಶ್ಚಾರ್ಜ್ ಆಗಿದ್ದಾರೆ. ಆದರೆ, ಇನ್ನೂ ೭೯೬ ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿನ್ನೆಲೆಯಲ್ಲಿ ಇರುವ ಕೆಲವೇ ಕೆಲವು ಆಸ್ಪತ್ರೆಗಳಲ್ಲಿ ಹಾಸಿಗೆಗಳ ಕೊರತೆ ಎದುರಾಗಿದೆ.
ರಾಜೀವ್ ಗಾಂಧಿ ಆಸ್ಪತ್ರೆಯಲ್ಲಿ ಬೆಡ್‌ಗಳ ಕೊರತೆ ಎದುರಾಗಿದ್ದು, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ೫೦೦ ಹಾಸಿಗೆಗಳು ಹಾಗೂ ಬೌರಿಂಗ್ ಆಸ್ಪತ್ರೆಯಲ್ಲಿ ೨೪೦ ಹಾಸಿಗೆಗಳು ಲಭ್ಯವಿದೆ. ಇದನ್ನು ಕೊರೊನಾ ಸೋಂಕು ಲಕ್ಷಣ ಇದ್ದವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಇದರಿಂದ ಮುಂದಿನ ದಿನಗಳಲ್ಲಿ ಸೋಂಕಿತರಿಗೆ ಚಿಕಿತ್ಸೆಗಾಗಿ ಹಾಸಿಗೆ ಅಲಭ್ಯತೆ ಎದುರಾಗುವ ಆತಂಕ ಕಾಡುತ್ತಿದೆ. ಈ ನಿಟ್ಟಿನಲ್ಲಿ ಸಿಎಂ ಬಿ.ಎಸ್.ವೈ ಹಿರಿಯ ಅಧಿಕಾರಿಗಳ ಜೊತೆಗೆ ತುರ್ತು ಸಭೆ ನಡೆಸಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಸಾಧ್ಯತೆ ಇದೆ.
ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ನೇಮಕಾತಿ 2025
ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ಇದರ ವತಿಯಿಂದ ಭಾರತ ಸರ್ಕಾರದ ವಿವಿಧ ಇಲಾಖೆಗಳು ಮತ್ತು ಮಿನಿಸ್ಟ್ರಿಗಳಲ್ಲಿ ಖಾಲಿಯಾಗಿರುವ ಗ್ರೂಪ್-B ಮತ್ತು ಗ್ರೂಪ್-C ಹುದ್ದೆಗಳನ್ನು ಭರ್ತಿ ಮಾಡುವ ಉದ್ದೇಶದಿಂದ...