Bangalore | ಮಾದಕ ವಸ್ತುಗಳನ್ನು ಮಾರಾಟ ಮಾಡ್ತಿದ್ದವರ ಬಂಧನ
ಬೆಂಗಳೂರು : ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಕೇರಳ ಮೂಲದ ಮೂವರನ್ನು ಹೆಚ್ ಎಸ್ ಆರ್ ಲೇಔಟ್ ಠಾಣಾ ಪೊಲೀಸರು ಬಂಧಿದ್ದಾರೆ.
ಬಂಧತರಿಂದ ಪೊಲೀಸರು ಬರೋಬ್ಬರಿ 13 ಲಕ್ಷ ಮೌಲ್ಯದ ಮಾದಕ ಪದಾರ್ಥಗಳನ್ನು ಜಪ್ತಿ ಮಾಡಿದ್ದಾರೆ.
ಶಿಯಾಜ್, ಮಹಮ್ಮದ್ ಶಾಹಿದ್, ಮಂಗಲ್ ತೋಡಿ ಜಿತೀನ್ ಬಂಧಿತರು.

ಶಿಯಾಜ್ ಮಲಯಾಳಂ ಕಿರುತೆರೆಯಲ್ಲಿ ಸಹನಟನಾಗಿ ಕೆಲಸ ಮಾಡಿಕೊಂಡಿದ್ದವನು.
ಮಹಮ್ಮದ್ ಶಾಹಿದ್ ಮೊಬೈಲ್ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದ.
ಬಂಧಿತರಿಂದ 191 ಗ್ರಾಂ ಎಂಡಿಎಂಎ ಹಾಗೂ 2.80ಕೆಜಿ ಗಾಂಜಾ ವಶಕ್ಕೆ ಪಡೆಯಲಾಗಿದೆ.
ಈ ಸಂಬಂಧ ಹೆಚ್ಎಸ್ಆರ್ ಲೇಔಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Bangalore Arrest of drug dealers