ಬೆಂಗಳೂರು : ಶಕ್ತಿ ಯೋಜನೆಗೆ ಖಾಸಗಿ ಟ್ಯಾಕ್ಸಿ ತರಬೇಕು, 3.64 ಲಕ್ಷ ಆಟೋ ಚಾಲಕರಿಗೆ ಮಾಸಿಕ 10 ಸಾವಿರ ರೂ. ನೀಡಬೇಕು, ರ‍್ಯಾಪಿಡೋ ಬೈಕ್ ಟ್ಯಾಕ್ಸಿ ನಿಷೇಧ ಮಾಡಬೇಕು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ಖಾಸಗಿ ಸಾರಿಗೆ ಒಕ್ಕೂಟ ಬಂದ್ ಗೆ ಕರೆ ನೀಡಿತ್ತು. ಈ ವೇಳೆ ನಿಯಮ ಉಲ್ಲಂಘಿಸಿದ ಹಲವರನ್ನು ಬಂಧಿಸಲಾಗಿದೆ.
ಪ್ರತಿಭಟನೆಯಲ್ಲಿ ಪೊಲೀಸರು ಒಟ್ಟು 13 ಪ್ರಕರಣಗಳನ್ನು ದಾಖಲಿಸಿದ್ದು, 13 ಕೇಸ್ ಗಳಿಗೆ ಸಂಬಂಧಿಸಿದಂತೆ ಕಾನೂನು ಉಲ್ಲಂಘಿಸಿದ 12 ಜನರನ್ನು ಬಂಧಿಸಲಾಗಿದೆ. ಕೇಂದ್ರ ವಿಭಾಗದಲ್ಲಿ 1 ಕೇಸ್, ಆಗ್ನೇಯ ವಿಭಾಗದಲ್ಲಿ 1 ಕೇಸ್, ಉತ್ತರ ವಿಭಾಗದಲ್ಲಿ 2 ಕೇಸ್, ಈಶಾನ್ಯ ವಿಭಾಗದಲ್ಲಿ 2 ಕೇಸ್, ಹಾಗೂ ಪಶ್ಚಿಮ ವಿಭಾಗದಲ್ಲಿ 7 ಪ್ರಕರಣಗಳು ದಾಖಲಾಗಿವೆ. ಇದನ್ನು ಬಿಟ್ಟರೆ ಬಹುತೇಕ ಬಂದ್ ಶಾಂತಿಯುತವಾಗಿದೆ.
ಸಚಿವ ರಾಮಲಿಂಗಾರೆಡ್ಡಿ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದ ನಂತರ ಪ್ರತಿಭಟನೆ ಕೈ ಬಿಡಲಾಗಿದೆ.