ADVERTISEMENT
Wednesday, September 30, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Bangalore | ವಿದ್ಯುತ್‌ ಬೆಲೆ ಏರಿಕೆಗೆ ಭಾಸ್ಕರ್‌ ರಾವ್‌ ವಿರೋಧ

Mahesh M Dhandu by Mahesh M Dhandu
September 29, 2022
in Newsbeat, State, ಬೆಂಗಳೂರು
Electricity price Hike

Bangalore

Share on FacebookShare on TwitterShare on WhatsappShare on Telegram

Bangalore | ವಿದ್ಯುತ್‌ ಬೆಲೆ ಏರಿಕೆಗೆ ಭಾಸ್ಕರ್‌ ರಾವ್‌ ವಿರೋಧ

ಬೆಂಗಳೂರು : ಅಕ್ಟೋಬರ್‌ 1ರಿಂದ ವಿದ್ಯುತ್‌ ದರವನ್ನು ಏರಿಕೆ ಮಾಡುವ ನಿರ್ಧಾರವನ್ನು ರಾಜ್ಯ ಸರ್ಕಾರ ಶೀಘ್ರವೇ ಹಿಂಪಡೆಯಬೇಕು ಎಂದು ಆಮ್‌ ಆದ್ಮಿ ಪಾರ್ಟಿಯ ರಾಜ್ಯ ಉಪಾಧ್ಯಕ್ಷ ಹಾಗೂ ನಿವೃತ್ತ ಐಪಿಎಸ್‌ ಅಧಿಕಾರಿ ಭಾಸ್ಕರ್‌ ರಾವ್‌ ಆಗ್ರಹಿಸಿದರು.

Related posts

ಮೂರು ಅಡಿ ಕಟೌಟ್ ರವಿಕುಮಾರ್, ಯತ್ನಾಳ್, ಪ್ರತಾಪ್ ಸಿಂಹ ಜೊತೆಗೆ ಬನ್ನಿ;ಹೆಚ್ಚಿನ ಚಿಕಿತ್ಸೆಗೆ ಸಿಎಂ ಪರಿಹಾರ ನಿಧಿಯಿಂದ ಹಣ ಕೊಡಿಸುವೆ: ಪ್ರದೀಪ್ ಈಶ್ವರ್

ನನಗೊಂದು ಇಲಾಖೆ ಕೊಟ್ಟು ನೋಡಿ ಕೆಲಸ ಮಾಡಿ ತೋರಿಸ್ತೀನಿ: ಮಂತ್ರಿಸ್ಥಾನದ ಆಸೆ ಬಿಚ್ಚಿಟ್ಟ ಶಾಸಕ ಪ್ರದೀಪ್ ಈಶ್ವರ್

September 29, 2026
ಉಳ್ಳವರಿಗೆ ಗ್ಯಾರಂಟಿ ರದ್ದು ಮಾಡಬೇಕಾ, ಬಡವರಿಗೆ ಮಾತ್ರ ಭಾಗ್ಯ ಸೀಮಿತವಾಗಲಿ: ಬಿಜೆಪಿ ಶಾಸಕರ ಪ್ರಸ್ತಾವನೆಗೆ ಡಿಕೆಶಿ ಖಡಕ್ ಕೌಂಟರ್

ಬರ ಪರಿಸ್ಥಿತಿ, ಕಸ್ತೂರಿರಂಗನ್ ವರದಿ ಕುರಿತು ಸರ್ವಪಕ್ಷ ಸಭೆಗೆ ಡಿಕೆಶಿ ಕರೆ

September 29, 2026

ಮಾಧ್ಯಮಗಳ ಜೊತೆ ಮಾತನಾಡಿದ ಭಾಸ್ಕರ್‌ ರಾವ್‌, “ಕಲ್ಲಿದ್ದಲು ಬೆಲೆಯಲ್ಲಿ ಸಣ್ಣ ಏರಿಕೆಯಾಗಿದ್ದನ್ನೇ ನೆಪ ಮಾಡಿಕೊಂಡು ಜನರಿಗೆ ವಿದ್ಯುತ್‌ ಶಾಕ್‌ ನೀಡಲು ಮುಂದಾಗಿರುವ ರಾಜ್ಯ ಸರ್ಕಾರದ ನಿರ್ಧಾರ ಖಂಡನೀಯ.

ಕಲಿದ್ದಲು ಬೆಲೆ ಇಳಿಕೆಯಾದಾಗ ಸರ್ಕಾರವು ವಿದ್ಯುತ್‌ ದರವನ್ನು ಇಳಿಕೆ ಮಾಡುವುದಿಲ್ಲ.

ಹೀಗಿರುವಾಗ ಕಲ್ಲಿದ್ದಲು ಬೆಲೆ ಏರಿಕೆಯಾದಾಗ ವಿದ್ಯುತ್‌ ದರ ಏರಿಕೆ ಮಾಡುವುದು ಎಷ್ಟು ಸರಿ? ಸರ್ಕಾರಿ ಕಚೇರಿಗಳು ಬಾಕಿ ಉಳಿಸಿಕೊಂಡಿರುವ ಸಾವಿರಾರು ಕೋಟಿ ರೂಪಾಯಿಯನ್ನು ವಸೂಲಿ ಮಾಡದ ಕಾರಣಕ್ಕೆ ವಿದ್ಯುತ್‌ ಕಂಪನಿಗಳು ನಷ್ಟ ಅನುಭವಿಸುತ್ತಿವೆ.

ಆ ನಷ್ಟವನ್ನು ಜನರ ತಲೆಗೆ ಕಟ್ಟುವುದು ಸರ್ಕಾರದ ಅಸಮರ್ಥತೆಯನ್ನು ತೋರಿಸುತ್ತಿದೆ” ಎಂದು ಹೇಳಿದರು.

 “ದೆಹಲಿಯಲ್ಲಿ ಅತ್ಯಂತ ಕಡಿಮೆ ಪ್ರಮಾಣದಲ್ಲಿ ವಿದ್ಯುತ್‌ ಉತ್ಪಾದನೆ ಮಾಡಲಾಗುತ್ತದೆ. ಆದರೂ ದೆಹಲಿಯ ಆಮ್‌ ಆದ್ಮಿ ಪಾರ್ಟಿ ಸರ್ಕಾರವು ಪ್ರತಿ ಕುಟುಂಬಕ್ಕೂ ತಿಂಗಳಿಗೆ 200 ಯೂನಿಟ್‌ ಉಚಿತ ವಿದ್ಯುತ್‌ ಪೂರೈಸುತ್ತಿದೆ.

ಸಿಎಂ ಅರವಿಂದ್‌ ಕೇಜ್ರಿವಾಲ್‌ ನೇತೃತ್ವದ ಎಎಪಿ ಸರ್ಕಾರ ಬಂದ ನಂತರ ಅಲ್ಲಿ ವಿದ್ಯುತ್‌ ದರವನ್ನು ಏರಿಕೆ ಮಾಡಲಾಗಿಲ್ಲ.

Bangalore
Bangalore

ದೆಹಲಿಯಲ್ಲಿ ಸಾಧ್ಯವಾಗಿದ್ದು ಕರ್ನಾಟಕದಲ್ಲಿ ಏಕೆ ಸಾಧ್ಯವಾಗುತ್ತಿಲ್ಲ ಎಂಬ ಬಗ್ಗೆ ನಾವೆಲ್ಲ ಗಂಭೀರವಾಗಿ ಯೋಚಿಸಬೇಕಿದೆ.

ಜನರು ಪಾವತಿಸುವ ಶುಲ್ಕವು ಭ್ರಷ್ಟರ ಪಾಲಾಗುತ್ತಿದ್ದರೆ, ಎಷ್ಟೇ ಶುಲ್ಕ ಏರಿಕೆ ಮಾಡಿದರೂ ಸಂಸ್ಥೆಗಳು ನಷ್ಟದಲ್ಲೇ ಮುಂದುವರಿಯುತ್ತವೆ” ಎಂದು ಭಾಸ್ಕರ್‌ ರಾವ್‌ ಹೇಳಿದರು.

 “ಸಿಎಂ ಬೊಮ್ಮಾಯಿಯವರ ಬಿಜೆಪಿ ಸರ್ಕಾರವು ಕಳೆದ ಒಂದು ವರ್ಷದಲ್ಲಿ ಮೂರನೇ ಸಲ ವಿದ್ಯುತ್‌ ದರ ಏರಿಕೆ ಮಾಡುತ್ತಿದೆ.

ಪದೇಪದೇ ವಿದ್ಯುತ್‌ ದರ ಏರಿಕೆ ಮಾಡಿ ಜನಸಾಮಾನ್ಯರ ಜೊತೆ ಚೆಲ್ಲಾಟವಾಡುತ್ತಿರುವ ಸರ್ಕಾರಕ್ಕೆ ಜನರು ತಕ್ಕ ಪಾಠ ಕಲಿಸಬೇಕು.

ಅಗತ್ಯ ವಸ್ತುಗಳು ಹಾಗೂ ಅಗತ್ಯ ಸೌಲಭ್ಯಗಳ ಬೆಲೆ ಏರಿಕೆಯು ಮುಂದಿನ ಚುನಾವಣೆಗಳಲ್ಲಿ ಪ್ರಮುಖ ವಿಷಯವಾಗಬೇಕು” ಎಂದು ಭಾಸ್ಕರ್‌ ರಾವ್‌ ಅಭಿಪ್ರಾಯಪಟ್ಟರು.

Electricity price Hike in Bangalore – Saaksha TV

Tags: #Saaksha TVbangaloreBHASKAR RAO
ShareTweetSendShare
Join us on:

Related Posts

ಮೂರು ಅಡಿ ಕಟೌಟ್ ರವಿಕುಮಾರ್, ಯತ್ನಾಳ್, ಪ್ರತಾಪ್ ಸಿಂಹ ಜೊತೆಗೆ ಬನ್ನಿ;ಹೆಚ್ಚಿನ ಚಿಕಿತ್ಸೆಗೆ ಸಿಎಂ ಪರಿಹಾರ ನಿಧಿಯಿಂದ ಹಣ ಕೊಡಿಸುವೆ: ಪ್ರದೀಪ್ ಈಶ್ವರ್

ನನಗೊಂದು ಇಲಾಖೆ ಕೊಟ್ಟು ನೋಡಿ ಕೆಲಸ ಮಾಡಿ ತೋರಿಸ್ತೀನಿ: ಮಂತ್ರಿಸ್ಥಾನದ ಆಸೆ ಬಿಚ್ಚಿಟ್ಟ ಶಾಸಕ ಪ್ರದೀಪ್ ಈಶ್ವರ್

by Shwetha
September 29, 2026
0

ಚಿಕ್ಕಬಳ್ಳಾಪುರ: ಸದಾ ತಮ್ಮ ವಿಭಿನ್ನ ಶೈಲಿಯ ಮಾತುಗಳಿಂದಲೇ ಸುದ್ದಿಯಲ್ಲಿರುವ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಈಗ ಬಹಿರಂಗವಾಗಿಯೇ ಮಂತ್ರಿಸ್ಥಾನದ ಆಕಾಂಕ್ಷೆ ವ್ಯಕ್ತಪಡಿಸಿದ್ದಾರೆ. ಶಿಕ್ಷಣ ಸುಧಾರಣಾ ಉಪ ಸಮಿತಿಗೆ...

ಉಳ್ಳವರಿಗೆ ಗ್ಯಾರಂಟಿ ರದ್ದು ಮಾಡಬೇಕಾ, ಬಡವರಿಗೆ ಮಾತ್ರ ಭಾಗ್ಯ ಸೀಮಿತವಾಗಲಿ: ಬಿಜೆಪಿ ಶಾಸಕರ ಪ್ರಸ್ತಾವನೆಗೆ ಡಿಕೆಶಿ ಖಡಕ್ ಕೌಂಟರ್

ಬರ ಪರಿಸ್ಥಿತಿ, ಕಸ್ತೂರಿರಂಗನ್ ವರದಿ ಕುರಿತು ಸರ್ವಪಕ್ಷ ಸಭೆಗೆ ಡಿಕೆಶಿ ಕರೆ

by Shwetha
September 29, 2026
0

ರಾಜ್ಯದಲ್ಲಿನ ಬರ ಪರಿಸ್ಥಿತಿ ಹಾಗೂ ಪಶ್ಚಿಮ ಘಟ್ಟಗಳಿಗೆ ಸಂಬಂಧಿಸಿದ ಕಸ್ತೂರಿರಂಗನ್ ವರದಿ ಕುರಿತು ಚರ್ಚಿಸಲು ಸರ್ವಪಕ್ಷ ಸಭೆ ಕರೆಯುವ ಅಗತ್ಯವಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ....

KPSC- ಪ್ರಿಯಾಂಕ್ ಖರ್ಗೆ ಗೆ DK ಶ್ರೀರಕ್ಷೆ:ಅಕ್ರಮ ಮಾಡಿಲ್ಲದಿದ್ದರೆ ಇಡಿ ಬಗ್ಗೆ ನಡುಕವೇಕೆ?ನಿದ್ರೆಯಿಲ್ಲದ ರಾತ್ರಿಗಳನ್ನು ಕಳೆಯುತ್ತಿರುವ ಸಿಎಂ

KPSC- ಪ್ರಿಯಾಂಕ್ ಖರ್ಗೆ ಗೆ DK ಶ್ರೀರಕ್ಷೆ:ಅಕ್ರಮ ಮಾಡಿಲ್ಲದಿದ್ದರೆ ಇಡಿ ಬಗ್ಗೆ ನಡುಕವೇಕೆ?ನಿದ್ರೆಯಿಲ್ಲದ ರಾತ್ರಿಗಳನ್ನು ಕಳೆಯುತ್ತಿರುವ ಸಿಎಂ

by Shwetha
September 29, 2026
0

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಪ್ರಕ್ರಿಯೆಯಲ್ಲಿ ಸರಣಿ ಅಕ್ರಮಗಳು ನಡೆಯುತ್ತಿವೆ ಎಂಬ ಗಂಭೀರ ಆರೋಪಗಳ ನಡುವೆಯೇ, ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರದ...

ಬಿಜೆಪಿ ಜತೆ ರಾಜಿಯಾಗಿದ್ದರೆ ಡಿಕೆಶಿ ಇವತ್ತು ಬೇರೆ ಲೆವೆಲ್ ನಲ್ಲೇ ಇರುತ್ತಿದ್ದರು: ಹೈಕಮಾಂಡ್ ಗೆ ಖಡಕ್ ಸಂದೇಶ ರವಾನಿಸಿದ ಬಾಲಕೃಷ್ಣ

ಗ್ಯಾರಂಟಿ ಯೋಜನೆಗಳ ಆರ್ಥಿಕ ಹೊರೆ ಬಗ್ಗೆ ಸಚಿವರ ಹೇಳಿಕೆ: ಸರ್ಕಾರದೊಳಗೂ ಚರ್ಚೆ

by Shwetha
September 29, 2026
0

ಕರ್ನಾಟಕದ ಐದು ಗ್ಯಾರಂಟಿ ಯೋಜನೆಗಳ ಆರ್ಥಿಕ ಪರಿಣಾಮದ ಕುರಿತು ರಾಜ್ಯ ಸರ್ಕಾರದೊಳಗೇ ಚರ್ಚೆ ತೀವ್ರಗೊಂಡಿದೆ. ಇತ್ತೀಚೆಗೆ ಸಚಿವ ಎಚ್.ಸಿ. ಬಾಲಕೃಷ್ಣ ಅವರು, ಗ್ಯಾರಂಟಿ ಯೋಜನೆಗಳು ಇಲ್ಲದಿದ್ದರೆ ಸರ್ಕಾರದ...

ಬಜೆಟ್ ಭಾರಕ್ಕೆ ನಲುಗಿದ DK ಸರ್ಕಾರ ಗ್ಯಾರಂಟಿ ನಿಯಮಗಳಲ್ಲಿ  ಬದಲಾವಣೆ ತರುವ ಸುಳಿವು ನೀಡಿದ CM ಡಿ ಕೆ ಶಿವಕುಮಾರ್

ಬಜೆಟ್ ಭಾರಕ್ಕೆ ನಲುಗಿದ DK ಸರ್ಕಾರ ಗ್ಯಾರಂಟಿ ನಿಯಮಗಳಲ್ಲಿ ಬದಲಾವಣೆ ತರುವ ಸುಳಿವು ನೀಡಿದ CM ಡಿ ಕೆ ಶಿವಕುಮಾರ್

by Shwetha
September 29, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಐದು ಗ್ಯಾರಂಟಿ ಯೋಜನೆಗಳ ಆರ್ಥಿಕ ಹೊರೆಯ ಕುರಿತು ಕೊನೆಗೂ ಸರ್ಕಾರ ಮೌನ ಮುರಿದಿದೆ. ಇದುವರೆಗೂ ವಿರೋಧ ಪಕ್ಷಗಳು ಮಾಡುತ್ತಿದ್ದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram