ಬೆಂಗಳೂರು | ಬೈಕ್ ಸವಾರರ ಶೋಕಿ; ಮೂರು ಕಾರು ಪಲ್ಟಿ
ಬೆಂಗಳೂರು : ನಗರದ ಬ್ಯಾಟರಾಯನಪುರ ಫ್ಲೈಓವರ್ ಬಳಿ ಐದು ಕಾರುಗಳ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಆರು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.
ನಂದಿ ಬೆಟ್ಟಕ್ಕೆ ಜಾಲಿ ರೈಡ್ ಹೋಗುತ್ತಿದ್ದ ಬೈಕ್ ಸವಾರರ ಟೀಂ ಕಾರ್ ಓವರ್ ಟೇಕ್ ಮಾಡಿದ್ದಾರೆ.
ಇದರಿಂದ ಗಾಬರಿಗೊಂಡ ಕಾರ್ ಚಾಲಕ ಎದುರು ರಸ್ತೆಗೆ ನುಗ್ಗಿದ್ದ ಪರಿಣಾಮ ಕಾರು ಪಲ್ಟಿಯಾಗಿದೆ.
ಇದೇ ವೇಳೆ ಎರಡು ಕಡೆಗಳಲ್ಲಿ ಬರುತ್ತಿದ್ದ ಐದು ಕಾರುಗಳು ಪರಸ್ಪರ ಡಿಕ್ಕಿಯಾಗಿ ಮೂರು ಕಾರು ಪಲ್ಟಿಯಾಗಿವೆ.
ಈ ಘಟನೆಯಲ್ಲಿ ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಸದ್ಯ ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಇನ್ನು ಈ ಅಪಘಾತದಿಂದಾಗಿ ಏರ್ ಪೋರ್ಟ್ ರಸ್ತೆಯಲ್ಲಿ ಕಿಲೋ ಮೀಟರ್ ಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಗಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









