Bangalore – ಮೆಟ್ರೋ ನಿಲ್ದಾಣದ ಒಳಗೆ ಮಾಲ್, ಶಾಪಿಂಗ್ ಕಾಂಪ್ಲೆಕ್ಸ್
ಬೆಂಗಳೂರು : ನಮ್ಮ ಮೆಟ್ರೋಗೆ ಹೈಟೆಕ್ ಟಚ್ ನೀಡಲು ಬಿಎಂಆರ್ ಸಿಎಲ್ ಮುಂದಾಗಿದ್ದು, ಮೆಟ್ರೋ ನಿಲ್ದಾಣದ ಒಳಗೆ ಮಾಲ್, ಶಾಪಿಂಗ್ ಕಾಂಪ್ಲೆಕ್ಸ್ ನಿರ್ಮಾಣಕ್ಕೆ ಪ್ಲಾನ್ ಮಾಡಿದೆ.
ನಾಡಪ್ರಭು ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್ ನಲ್ಲಿ ಆದಾಯ ಸಂಗ್ರಹಣೆ ಮಾಡುವ ಭಾಗವಾಗಿ ಇನ್ನೂ ನಾಲ್ಕು ಮಹಡಿಗಳನ್ನು ನಿರ್ಮಾಣ ಮಾಡಲಿದ್ದಾರೆ.

ಈ ಬಗ್ಗೆ ಮೆಟ್ರೋ ವ್ಯವಸ್ಥಾಪಕ ನಿರ್ದೇಶಕರು ಮಾಹಿತಿ ಹಂಚಿಕೊಂಡಿದ್ದು, ಮೆಜೆಸ್ಟಿಕ್ ಮೆಟ್ರೋ ನಿಲ್ದಾಣವನ್ನು ಭವಿಷಯದ ವಾಣಿಜ್ಯ ಚಟವಟಿಕೆಗಳನ್ನು ಗಮನದಲ್ಲಿಟ್ಟುಕೊಂಡು ನಿರ್ಮಾಣ ಮಾಡಲಾಗಿದೆ.
ನೆಲದಡಿಯಲ್ಲಿಯೇ ನಾಲ್ಕು ಮಹಡಿ ನಿರ್ಮಾಣ ಮಾಡಿ, ವಾಣಿಜ್ಯ ಚಟುವಟಿಕೆಗಳನ್ನು ಆರಂಭಿಸಲಾಗುತ್ತದೆ.
ಬಿಎಂಆರ್ ಸಿಎಲ್ ನೆಲದಡಿಯಲ್ಲಿ ನಿರ್ಮಾಣ ಮಾಡಿರುವ ನಾಡಪ್ರಭು ಕೆಂಪೇಗೌಡ ನಿಲ್ದಾಣ ಏಳು ಎಕರೆ ಪ್ರದೇಶದಲ್ಲಿದೆ. ಇನ್ನೆರಡು ತಿಂಗಳಲ್ಲಿ ಕೆಲಸ ಆರಂಭಿಸುವ ತಯಾರಿ ನಡೆದಿದೆ ಎಂದಿದ್ದಾರೆ.








