Bangalore | ಸಿಎಂ ನಿವಾಸದ ಎದುರು ಪೌರ ಕಾರ್ಮಿಕರ ಪ್ರತಿಭಟನೆ
ಬೆಂಗಳೂರು : ಬಿಬಿಎಂಪಿ ಪೌರಕಾರ್ಮಿಕರಿಗೆ ಖಾಯಂ ನೇಮಕಾತಿ ಮಾಡುವಂತೆ ಆಗ್ರಹಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಆರ್ ಟಿ ನಗರದ ನಿವಾಸದ ಎದುರು ಪ್ರತಿಭಟನೆ ನಡೆಸಲಾಗುತ್ತಿದೆ.
ಬಿಬಿಎಂಪಿ ಪೌರಕಾರ್ಮಿಕರಿಂದ ಪ್ರತಿಭಟನೆ ನಡೆಯುತ್ತಿದ್ದು, ಖಾಯಂ ನೇಮಕಾತಿಗೆ ಪೌರ ಕಾರ್ಮಿಕರು ಆಗ್ರಹಿಸುತ್ತಿದ್ದಾರೆ.
8 ಸಾವಿರ ಪೌರಕಾರ್ಮಿಕರಿಗೆ ಖಾಯಂ ಮಾಡಿಕೊಳ್ಳಲು ಅವಕಾಶ ಇದೆ, ಸದ್ಯ 1 ಸಾವಿರ ಪೌರಕಾರ್ಮಿಕರ ಖಾಯಮಾತಿ ಆಗಿದೆ.
ಉಳಿದ 7 ಸಾವಿರ ಪೌರಕಾರ್ಮಿಕರ ಖಾಯಮಾತಿ ಮಾಡಿಕೊಳ್ಳಬೇಕೆಂದು ಸದ್ಯ ಪ್ರತಿಭಟನಾಕಾರರು ಆಗ್ರಹಿಸುತ್ತಿದ್ದಾರೆ.
ನಿವಾಸದಿಂದ ಸಿಎಂ ತೆರಳಿದ ಮೇಲೂ ಸರ್ಕಾರದ ವಿರುದ್ಧ ಪೌರ ಕಾರ್ಮಿಕರು ಧಿಕ್ಕಾರಗಳನ್ನು ಕೂಗುತ್ತಿದ್ದಾರೆ.
ಪೌರಕಾರ್ಮಿಕರಿಗೆ ಅನ್ಯಾಯ ಆಗಿದೆ ಎಂದು ಆಕ್ರೋಶ ಹೊರಹಾಕುತ್ತಿದ್ದಾರೆ.