Bangalore ಬೆಂಗಳೂರು : ನಗರದ ಈ ಪೊಲೀಸ್ ಠಾಣೆಯಲ್ಲಿ ಕೊರೊನಾ ಸ್ಫೋಟ
ಬೆಂಗಳೂರು : ಕೊರೊನಾ ಎರಡನೇ ಅಲೆ ರಾಜ್ಯದಲ್ಲಿ ರುದ್ರನರ್ತನ ಮಾಡುತ್ತಾ ಸಾಗಿದೆ. ಪ್ರತಿದಿನ ರಾಜ್ಯದಲ್ಲಿ ಸಾವಿರಗಟ್ಟಲೇ ಕೊರೊನಾ ಪ್ರಕರಣಗಳು ವರದಿಯಾಗುತ್ತಿವೆ.
ಅದರಲ್ಲೂ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪ್ರತಿದಿನ ಕೊರೊನಾ ಸ್ಫೋಟವಾಗುತ್ತಿದ್ದು, ಅತೀ ಹೆಚ್ಚು ಪ್ರಕರಣಗಳು ದಾಖಲಾಗುತ್ತಿವೆ.
ಈ ಮಧ್ಯೆ ನಗರದ ಚಂದ್ರಾಲೇಔಟ್ ಪೊಲೀಸ್ ಠಾಣೆಯ 60 ಸಿಬ್ಬಂದಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿರುವುದಾಗಿ ಪಶ್ಚಿಮ ಡಿಸಿಪಿ ಮಾಹಿತಿ ನೀಡಿದ್ದಾರೆ.
ಇನ್ನು ಬೆಂಗಳೂರಿನಲ್ಲಿ ಒಂದೇ ದಿನ 4991 ಮಂದಿಗೆ ಕೊರೊನಾ ವೈರಸ್ ಸೋಂಕು ತಗುಲಿದ್ದು, ಇನ್ನು ಬೆಂಗಳೂರು ದಕ್ಷಿಣ ವಲಯದಲ್ಲೇ ಅತಿಹೆಚ್ಚು ಜನರಿಗೆ ಕೋವಿಡ್ ಹರಡಿದೆ ಎಂದು ತಿಳಿದುಬಂದಿದೆ.
