ಬೆಂಗಳೂರು | ಶೋಕಿಗಾಗಿ ಡ್ರಗ್ಸ್ ಮಾರುತ್ತಿದ್ದವರ ಬಂಧನ
ಬೆಂಗಳೂರು : ನಗರದ ಸಿದ್ದಾಪುರ ಪೊಲೀಸರು ಕಾರ್ಯಾಚರಣೆ ನಡೆಸಿ ಇಬ್ಬರು ಡ್ರಗ್ಸ್ ಪೆಡ್ಲರ್ ಗಳನ್ನು ಬಂಧಿಸಿದ್ದಾರೆ.
ಬಂಧಿತರನ್ನು ಕೌಶಿಕ್, ರಂಗನಾಥ್ ಎಂದು ಗುರುತಿಸಲಾಗಿದ್ದು, ಇವರಿಂದ ಎಕ್ಟೆಸಿ ಮಾತ್ರೆಗಳು, ಹ್ಯಾಶ್ ಆಯಿಲ್, ಎಲ್ ಎಸ್ ಡಿ ಸ್ಟ್ರಿಪ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಬಂಧಿತ ಆರೋಪಿಗಳ ಪೈಕಿ ಕೌಶಿಕ್ ಪದವೀಧರನಾಗಿದ್ದು, ಶೋಕಿಗಾಗಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಎಂದು ತಿಳಿದುಬಂದಿದೆ.
ಸದ್ಯ ಆರೋಪಿಗಳನ್ನು ವಿಚಾರಣಗೆ ಒಳಪಡಿಸಿರುವ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.