Bangalore | ಮಾಜಿ ಸಚಿವ ಎಂ.ರಘುಪತಿ ಇನ್ನಿಲ್ಲ
ಬೆಂಗಳೂರು : ಮಾಜಿ ಸಚಿವ ಎಂ.ರಘುಪತಿ ಅವರು ಇಂದು ಬೆಳಗಿನ ಜಾವ ಮೂರು ಗಂಟೆ ಸುಮಾರಿಗೆ ವಿಧಿವಶರಾಗಿದ್ದಾರೆ.
ಅವರು ಬೆಂಗಳೂರಿನ ಮಲ್ಲೇಶ್ವರಂ ನಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.
ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ಎಂ.ರಘುಪತಿ ಅವರು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ, ಯೂತ್ ಕಾಂಗ್ರೆಸ್ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು.
ಅಲ್ಲದೇ ರಾಮಕೃಷ್ಣ ಹೆಗಡೆ ಸಂಪುಟದಲ್ಲಿ ಸಚಿವರಾಗಿ ಸೇವೆ ಸಲ್ಲಿಸಿದ್ದರು.

ಇಂದು ಮಲ್ಲೇಶ್ವರಂನ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ಸಾರ್ವಜನಿಕ ವ್ಯವಸ್ಥೆಯನ್ನು ಮಾಡಲಾಗಿದೆ.
ನಾಳೆ ಬೆಳಗ್ಗೆ ಅಂತಿಮ ವಿಧಿವಿಧಾನ ನಡೆಯಲಿದೆ ಎಂದು ಕುಟುಂಬದ ಮೂಲಗಳ ತಿಳಿಸಿವೆ.








