ಸಿಲಿಕಾನ್ ಸಿಟಿಯಲ್ಲಿ ಭಾರಿ ಮಳೆ : ಬೆಚ್ಚಿಬಿದ್ದ ಜನರು

1 min read
Bangalore saaksha tv

ಸಿಲಿಕಾನ್ ಸಿಟಿಯಲ್ಲಿ ಭಾರಿ ಮಳೆ : ಬೆಚ್ಚಿಬಿದ್ದ ಜನರು Bangalore saaksha tv

ಹಲವೆಡೆ ಮನೆಗಳಿಗೆ ನುಗ್ಗಿದ ಮಳೆ ನೀರು

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ

ಕರ್ನಾಟಕದಲ್ಲಿ ಇನ್ನೂ ಮೂರು ದಿನ ಭಾರೀ ಮಳೆ

ಬೆಂಗಳೂರು : ಸೋಮವಾರ ರಾತ್ರಿ ಸುರಿದ ಭಾರಿ ಮಳೆಗೆ ಜನರು ಬೆಚ್ಚಿ ಬಿದ್ದಿದ್ದಾರೆ. ರಾತ್ರಿಯಿಡೀ ಸುರಿದ ಮಳೆಯಿಂದಾಗಿ ನಗರದಲ್ಲಿ ನಾನಾ ಅವಾಂತರಗಳು ಸೃಷ್ಠಿಯಾಗಿವೆ.

ಮುಖ್ಯವಾಗಿ ವಸಂತನಗರ, ನಾಗರಭಾವಿ, ಬಸವೇಶ್ವರ ನಗರ ಸೇರಿದಂತೆ ಹಲವೆಡೆ ಮನೆಗಳಿಗೆ ನೀರು ನುಗ್ಗಿದ್ದು, ಜನರು ಪರದಾಡುವಂತಾಯಿತು.

ಇನ್ನು, ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವರುಣಾ ಭಾರಿ ಅವಾಂತರವನ್ನೇ ಸೃಷ್ಟಿಸಿದ್ದ.

Bangalore saaksha tv

ಕಳೆದ ರಾತ್ರಿ ಏರ್ಪೋಟ್ ರಸ್ತೆಯಲ್ಲೇ ಮಂಡಿಯುದ್ದಕ್ಕೆ ಮಳೆ ನೀರು ನಿಂತಿತ್ತು. ಪ್ರಯಾಣಿಕರು ಪರದಾಡಿದರು.

ಇನ್ನು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಕಾರಣ ಕರ್ನಾಟಕದಲ್ಲಿ ಇನ್ನೂ ಮೂರು ದಿನ ಭಾರೀ ಮಳೆಯಾಗಲಿದೆ.

ಹೀಗಾಗಿ ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲಿ ಇಂದು ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ.

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd