Bangalore | ನಾಳೆಯಿಂದಲೇ ಕಾಲೇಜು ಓಪನ್
ಬೆಂಗಳೂರು : ಉನ್ನತ ಶಿಕ್ಷಣ ಇಲಾಖೆ ವ್ಯಾಪ್ತಿಯ ವಿಶ್ವವಿದ್ಯಾಲಯ, ಕಾಲೇಜು ಶಿಕ್ಷಣ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಕಾಲೇಜು, ಡಿಪ್ಲೋಮಾ ಕಾಲೇಜುಗಳು ಫೆಬ್ರವರಿ 16 ರಿಂದ ಪುನರಾರಂಭಗೊಳ್ಳಲಿವೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಕೆ.ಅಶ್ವಥ್ ನಾರಾಯಣ್ ತಿಳಿಸಿದ್ದಾರೆ. bangalore-from-tomorrow-college-open
ಈ ಕುರಿತು ಸಚಿವರು ಮಾಧ್ಯಮ ಪ್ರಕಟನೆ ಹೊರಡಿಸಿದ್ದಾರೆ. 11-02-2022 ರ ಸುತ್ತೊಲೆಯನ್ನು ಮಾರ್ಪಡಿಸಿ 16.02.2022 ರ ರಜೆಯನ್ನು ಈ ಕೂಡಲೇ ಜಾರಿಗೆ ಬರುವಂತೆ ರದ್ದುಗೊಳಿಸಿ, ಆ ದಿನದಿಂದಲೇ ಉನ್ನತ ಶಿಕ್ಷಣ ಇಲಾಖೆಯ ವ್ಯಾಪ್ತಿಗೊಳಪಡುವ ಎಲ್ಲಾ ವಿಶ್ವವಿದ್ಯಾಲಯಗಳು ಹಾಗೂ ಕಾಲೇಜು ಶಿಕ್ಷಣ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ವ್ಯಾಪ್ತಿಗೊಳಪಡುವ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪದವಿ ಕಾಲೇಜುಗಳು ಡಿಪ್ಲೋಮೋ ಕಾಲೇಜುಗಳನ್ನು ಪುನರ್ ಫ್ರಾರಂಭಿಸಲು ಶಿಕ್ಷಣ ಇಲಾಖೆ ಸೂಚಿಸಿದೆ.
ಉನ್ನತ ಶಿಕ್ಷಣ ಇಲಾಖೆ ವ್ಯಾಪ್ತಿಯ ವಿಶ್ವವಿದ್ಯಾಲಯ, ಕಾಲೇಜು ಶಿಕ್ಷಣ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಕಾಲೇಜು, ಡಿಪ್ಲೋಮಾ ಕಾಲೇಜುಗಳು ಫೆಬ್ರವರಿ 16 ರಿಂದ ಪುನರಾರಂಭಗೊಳ್ಳಲಿವೆ.
ಉಚ್ಛ ನ್ಯಾಯಾಲಯದ ಆದೇಶ ಪಾಲಿಸುವ ಜತೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಸೂಕ್ತ ಮುನ್ನೆಚ್ಚರಿಕೆ ತೆಗೆದುಕೊಂಡು ತರಗತಿಗಳನ್ನು ನಡೆಸಲಾಗುವುದು. ಮಾಹಿತಿಗಾಗಿ: pic.twitter.com/vftgic80Yl
— Dr. C.N. Ashwath Narayan (@drashwathcn) February 15, 2022
ಅಲ್ಲದೇ ನ್ಯಾಯಾಲಯದ ಆದೇಶ ಪಾಲಿಸುವ ಜತೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಸೂಕ್ತ ಮುನ್ನೆಚ್ಚರಿಕೆ ತೆಗೆದುಕೊಂಡು ತರಗತಿಗಳನ್ನು ನಡೆಸಲಾಗುವುದು ಎಂದು ತಿಳಿಸಿದೆ.









